Breaking News

ಕಮಲಾಪುರದ ಮೃಗಾಲಯದಲ್ಲಿ ಹೆಣ್ಣು ಹುಲಿಯೊಂದು ಸಾವನ್ನಪ್ಪಿದೆ. ಇನ್ನು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಕಾಡಾನೆ ದಾಳಿಗೆ ಯುವಕನೋರ್ವ ಮೃತಪಟ್ಟಿದ್ದಾನೆ.

Spread the love

ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದಲ್ಲಿನ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯದಲ್ಲಿನ ‘ಸಿಂಧು’ ಎಂಬ ಹೆಸರಿನ ಹೆಣ್ಣು ಹುಲಿ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದೆ.

ಈ ಹುಲಿಗೆ ಅಂದಾಜು 17 ರಿಂದ 18 ವರ್ಷ ವಯಸ್ಸಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ವಯೋಸಹಜವಾಗಿ ಮೃತಪಟ್ಟಿರುತ್ತದೆ ಎಂದು ಉಪಸಂರಕ್ಷಣಾಧಿಕಾರಿ ಹಾಗೂ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ರಾಜೇಶ್ ನಾಯ್ಕ ತಿಳಿಸಿದ್ದಾರೆ.ಎರಡು ತಿಂಗಳಲ್ಲಿ ಎರಡು ಹುಲಿ ಸಾವು: ಕಳೆದ ತಿಂಗಳು ಜೂನ್​ನಲ್ಲಿ ಇದೇ ಮೃಗಾಲಯದಲ್ಲಿ ದೇವಿ ಹೆಸರಿನ ಹೆಣ್ಣು ಹುಲಿ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿತ್ತು. ಇದೀಗ ಸಿಂಧು ಎಂಬ ಮತ್ತೊಂದು ಹುಲಿ ಮೃತಪಟ್ಟಿದೆ. ಇದರಿಂದ ಎರಡು ತಿಂಗಳಲ್ಲಿ ಎರಡು ಹುಲಿಗಳು ಸಾವನ್ನಪ್ಪಿವೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ