Breaking News

ಚಿಕಿತ್ಸೆ ಫಲಿಸದೇ 11 ವರ್ಷದ ಬಾಲಕ ಸಾವು

Spread the love

ಕಾರವಾರ: ಕ್ಯಾಸನೂರು ಅರಣ್ಯ ಕಾಯಿಲೆ (ಕೆಎಫ್‌ಡಿ) ಯೊಂದಿಗೆ ಹೋರಾಡುತ್ತಿದ್ದ ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದ 11 ವರ್ಷದ ಬಾಲಕ ಆರವ್, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಏಪ್ರಿಲ್‌ನಲ್ಲಿ ಆರವ್‌ಗೆ ಕೆಎಫ್‌ಡಿ ಇರುವುದು ದೃಢಪಟ್ಟಿತ್ತು. ನಂತರ ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ದಾಖಲಾಗಲು ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ನೆರವು ನೀಡಿದ್ದರು. ಮಣಿಪಾಲ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳದಿದ್ದಾಗ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಮತ್ತು ನಂತರ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಗೆ ದಾಖಲಿಸಲು ತೊಡಕುಗಳು ಉಂಟಾದವು. ಆ ಸಮಯದಲ್ಲಿ ಮಾಧವ ನಾಯಕ ಅವರು ವೆಂಟಿಲೇಟರ್ ಅಂಬ್ಯುಲೆನ್ಸ್ ವ್ಯವಸ್ಥೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಆರೋಗ್ಯ ಮತ್ತು ವೈದ್ಯಕೀಯ ಸಚಿವರ ಆಪ್ತ ಕಾರ್ಯದರ್ಶಿಗಳು ಸೇರಿದಂತೆ ವಿವಿಧ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದರು.

ಎಲ್ಲರ ಸತತ ಪ್ರಯತ್ನಗಳು ಮತ್ತು ಪ್ರಾರ್ಥನೆಗಳ ಹೊರತಾಗಿಯೂ, ಬಾಲಕನ ದೇಹವು ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಸಾವನ್ನಪ್ಪಿದ್ದಾನೆ. ಅನೇಕ ಕನಸುಗಳೊಂದಿಗೆ ಬದುಕಬೇಕಿದ್ದ ಈ ಬಾಲಕ ಕೆಎಫ್‌ಡಿ ಎಂಬ ಮಾರಕ ರೋಗಕ್ಕೆ ಬಲಿಯಾಗಿದ್ದಾನೆ. ಈ ವರ್ಷ ಉತ್ತರ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ 9 ಮಂಗನ ಕಾಯಿಲೆ ಪ್ರಕರಣಗಳು ದೃಢಪಟ್ಟಿದ್ದು, ಆರವ್‌ನ ಸಾವಿನೊಂದಿಗೆ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ