Breaking News

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಶನಿವಾರ ರಾತ್ರಿ ಸೂಫಿ ಸಂತರ ಸೌಹಾರ್ದ ವೇದಿಕೆ ವತಿಯಿಂದ ಆಯೋಜಿಸಿದ್ದ ಸೂಫಿ ಸಂತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ..

Spread the love

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಶನಿವಾರ ರಾತ್ರಿ ಸೂಫಿ ಸಂತರ ಸೌಹಾರ್ದ ವೇದಿಕೆ ವತಿಯಿಂದ ಆಯೋಜಿಸಿದ್ದ ಸೂಫಿ ಸಂತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ..
ಸಮಾನ ಶಿಕ್ಷಣ, ಹಕ್ಕು ಮತ್ತು ಅವಕಾಶಗಳು ದೊರೆತಾಗ ಮಾತ್ರ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ಬರುತ್ತದೆ.‌
ನಾವೆಲ್ಲರೂ ಒಂದಾಗಿ ಹೋರಾಡಿದಾಗ ಮಾತ್ರ ಯಶಸ್ಸು ಗಳಿಸಲು ಸಾಧ್ಯ. ನಮ್ಮೆಲ್ಲರನ್ನೂ ಬೆಸೆಯುವ ಭಾವೈಕ್ಯತೆ ಸಮಾಜದಲ್ಲಿ ನೆಲೆಸಬೇಕು, ಅಂಬೇಡ್ಕರ್ ಮತ್ತು ಬಸವೇಶ್ವರರ ಚಿಂತನೆಗಳು ಸಮಾಜದಲ್ಲಿ ಎಲ್ಲ ಸಮಸ್ಯೆಗಳಿಗೂ ಪರಿಹಾರ ನೀಡುತ್ತವೆ. ಅಂಬೇಡ್ಕರ್, ಬಸವೇಶ್ವರರ ಅನುಯಾಯಿಗಳು ಒಂದಾಗಬೇಕು’ ‘ಎಲ್ಲ ಸಮಸ್ಯೆಗಳಿಗೆ ಅಂಬೇಡ್ಕರ್ ಚಿಂತನೆಗಳಲ್ಲಿ ಪರಿಹಾರ ಇದೆ. ಅಂಬೇಡ್ಕರ್, ಬಸವ ಜಯಂತಿಯಲ್ಲಿ ಮುಸ್ಲಿಮರು ಭಾಗವಹಿಸಿ, ನಿಮ್ಮ ಕಾರ್ಯಗಳಲ್ಲಿ ನಾವು ಭಾಗವಹಿಸುತ್ತೇವೆ. ಒಂದೇ ವೇದಿಕೆಯಲ್ಲಿ ಹೊಸ ವಿಚಾರಗಳ‌ ಚರ್ಚೆ ನಡೆಯಲಿ ಎಂದು ತಿಳಿಸಿದೆ.
ಸೂಫಿ ಸಂತರು ಭಾವೈಕ್ಯ ಸಮಾಜ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇಂತಹ ಸಮ್ಮೇಳನಗಳು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಡೆಯಬೇಕು. ಕರ್ನಾಟಕ ವಕ್ಫ್ ಮಂಡಳಿಯಿಂದ ಅಲ್ಪಸಂಖ್ಯಾತರ ಅಭಿವೃದ್ಧಿಗೆ ₹4 ಸಾವಿರ ಕೋಟಿ ಅನುದಾನ ನೀಡಿದ್ದು, ಇದರ ಸದುಪಯೋಗ ಪಡೆದುಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಉನ್ನತ ಸ್ಥಾನಗಳಿಗೆ ತರಬೇಕು ಎಂದು ಸಲಹೆ ನೀಡಿದೆ.
ಈ ಸಂದರ್ಭದಲ್ಲಿ ಕರ್ನಾಟಕ ವಕ್ಫ್ ಮಂಡಳಿಯ ಅಧ್ಯಕ್ಷರು ಹಾಗೂ ಧರ್ಮಗುರುಗಳಾದ ಶ್ರೀ ಸೈಯದ್ ಮುಹಮ್ಮದ್ ಅಲಿ ಅಲ್ ಹೋಸೈನಿ, ಶಿರಹಟ್ಟಿಯ ಶ್ರೀ ದಿಂಗಾಲೇಶ್ವರ ಮಹಾಸ್ವಾಮಿಗಳು, ಸಚಿವರಾದ ಶಿವಾನಂದ ಪಾಟೀಲ, ರಹೀಂ‌ ಖಾನ್, ವಿಧಾನ ಪರಿಷತ್‌ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ್‌, ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್, ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ