Breaking News

ಎಸ್​ಸಿ, ಎಸ್​ಟಿಗೆ ಮಾತ್ರ ಮೀಸಲಿಟ್ಟ ಹಣ ಗ್ಯಾರಂಟಿಗಳಿಗೆ: ಮತ್ತೆ ವಿವಾದ ಮೈಮೇಲೆ ಎಳೆದುಕೊಳ್ಳಲು ಮುಂದಾದ ಸರ್ಕಾರ

Spread the love

ಬೆಂಗಳೂರು, ಜುಲೈ 28: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ (SC ST) ಅಭಿವೃದ್ಧಿಗೆ ಮೀಸಲಿಟ್ಟಿದ್ದ ಅನುದಾನದಿಂದ ಉಚಿತ ಗ್ಯಾರಂಟಿ ಯೋಜನೆಗಳಿಗೆ (Guarantee Schemes) ಹಣ ಬಳಸಿ ತೀವ್ರ ಟೀಕೆಗೆ ಗುರಿಯಾಗಿದ್ದ ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರ ಇದೀಗ ಮತ್ತೊಮ್ಮೆ ವಿವಾದ ಮೈಮೇಲೆ ಎಳೆದುಕೊಂಡಿದೆ. ಎಸ್​ಸಿ, ಎಸ್​ಟಿಗೆ ಮಾತ್ರ ಮೀಸಲಿಟ್ಟ ಎಸ್​ಸಿಎಸ್​​ಪಿ-ಟಿಎಸ್​​ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್ ಮಾಡಲು ಮುಂದಾಗಿದೆ. ಎಸ್​ಸಿಎಸ್​​ಪಿ-ಟಿಎಸ್​​ಪಿ (ಪರಿಶಿಷ್ಟ ಜಾತಿ ಉಪ ಯಜನೆ ಮತ್ತು ಬುಡಕಟ್ಟು ಉಪಯೋಜನೆ) ಯೋಜನೆಯಡಿ 2025-26ರ ಸಾಲಿನಲ್ಲಿ 42,017.51 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಈ ಪೈಕಿ 11,896.84 ಕೋಟಿ ರೂ. ಮೊತ್ತವನ್ನು ಗ್ಯಾರಂಟಿ ಯೋಜನೆಗೆ ಬಳಸಲು ಸರ್ಕಾರ ಚಿಂತನೆ ನಡೆಸಿದೆ.

ಯಾವ ಗ್ಯಾರಂಟಿ ಯೋಜನೆಗೆ ಎಷ್ಟು ಹಣ?

ಎಸ್​ಸಿಎಸ್​​ಪಿ-ಟಿಎಸ್​​ಪಿ ಯೋಜನೆಯಿಂದ ಯುವನಿಧಿ ಯೋಜನೆಗೆ 162 ಕೋಟಿ ರೂಪಾಯಿ, ಗೃಹಲಕ್ಷ್ಮೀ ಯೋಜನೆಗೆ 7,438 ಕೋಟಿ ರೂ., ಗೃಹಜ್ಯೋತಿಗೆ 2,626 ಕೋಟಿ ರೂ., ಶಕ್ತಿ ಯೋಜನೆಗೆ 1,537 ಕೋಟಿ ರೂ. ಹಾಗೂ ಅನ್ನಭಾಗ್ಯಕ್ಕೆ 1,670 ಕೋಟಿ ರೂ. ಬಳಕೆಗೆ ಸರ್ಕಾರ ಮುಂದಾಗಿದೆ.

ಕಳೆದ ಹಣಕಾಸು ವರ್ಷದಲ್ಲಿಯೂ ಎಸ್​ಸಿಎಸ್​​ಪಿ-ಟಿಎಸ್​​ಪಿ ಅನುದಾನದಿಂದ ಒಂದು ಪಾಲನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗಿತ್ತು. ಸರ್ಕಾರದ ಈ ನಡೆಗೆ ದಲಿತ ಸಂಘಟನೆಗಳು, ವಿಪಕ್ಷಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದವು. ಕಳೆದ ಬಾರಿಯ ಅಧಿವೇಶನದಲ್ಲಿ ಕೂಡ ಇದೇ ವಿಚಾರಕ್ಕೆ ಜಟಾಪಟಿ ಆಗಿತ್ತು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ