Breaking News

ಕಾಂಗ್ರೆಸ್ ಕಚೇರಿಯಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ

Spread the love

ಬೆಳಗಾವಿ ನಗರದಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಬೆಳಗಾವಿ ನಗರ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ‌ಪಾಲ್ಗೊಂಡು, ಯುವಕರನ್ನು ಉದ್ದೇಶಿಸಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಮಾತಮಾಡಿದರು

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ವಹಿಸಿದ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕವಾಗಿ ನಿರ್ವಹಿಸಲು ಮತ್ತು ಅವರ ಮಾರ್ಗದರ್ಶನದಂತೆ ಪಕ್ಷವನ್ನು ಇನ್ನಷ್ಟು ಬಲಪಡಿಸಲು ಕರೆ ನೀಡಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ಮೂಲಕ, 2028 ರಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಲು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಸಚಿವರಾದ ಶ್ರೀ ಸತೀಶ ಜಾರಕಿಹೊಳಿ ಅವರು ಕಾರ್ಮಿಕ ಇಲಾಖೆ ಸಚಿವರಾದ ಸಂತೋಷ್ ಲಾಡ್ ರವರು ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಮತಿ ಲಕ್ಷ್ಮೀ ಹೆಬ್ಬಾಳ್ಕರ್, ಕೆಪಿವೈಸಿಸಿ ಅಧ್ಯಕ್ಷರಾದ ಮಂಜುನಾಥ ಗೌಡ, ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜು (ಆಸಿಫ್) ಸೇಠ್ ರವರು ಜಿಲ್ಲಾ ಅಧ್ಯಕ್ಷರಾದ ವಿನಯ್ ನಾವಲಗಟ್ಟಿ ರವರು ಉಪಾಧ್ಯಕ್ಷರಾದ ಅಬ್ದುಲ್ ದೇಸಾಯಿ, ದೀಪಿಕಾ ರೆಡ್ಡಿ, ವೈಶಾಕ್ ಯಾದವ್ ಕಾರ್ಯದರ್ಶಿ ಸಾದಿಕ್ ಪಾಷಾ ಹಾಗೂ ನೂತನ ಪದಾಧಿಕಾರಿಗಳು ಯುವ ಮಿತ್ರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ