Breaking News

ದೆಹಲಿಯಲ್ಲಿಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಶ್ರೀ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಉಂಟಾಗಿರುವ ರಸಗೊಬ್ಬರದ ಕೊರತೆ ಕುರಿತು ಚರ್ಚಿ

Spread the love

.

ದೆಹಲಿಯಲ್ಲಿಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಶ್ರೀ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಉಂಟಾಗಿರುವ ರಸಗೊಬ್ಬರದ ಕೊರತೆ ಕುರಿತು ಚರ್ಚಿಸಿದೆವು.

ಚರ್ಚೆಯ ಸಂದರ್ಭದಲ್ಲಿ, ಕೇಂದ್ರ ಸರ್ಕಾರವು ಈಗಾಗಲೇ ರಾಜ್ಯಕ್ಕೆ ಹೆಚ್ಚುವರಿ ರಸಗೊಬ್ಬರವನ್ನು ಒದಗಿಸಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. ಜೊತೆಗೆ, ರಾಜ್ಯಕ್ಕೆ ಮತ್ತಷ್ಟು ರಸಗೊಬ್ಬರದ ಅವಶ್ಯಕತೆ ಇದ್ದರೆ, ಅದನ್ನು ಪೂರೈಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಸಚಿವರು ತಿಳಿಸಿದರು.

ಈ ಮಹತ್ವದ ಸಭೆಯಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ, ಶ್ರೀ ಸೋಮಣ್ಣ, ಶ್ರೀ ಜಗದೀಶ್ ಶೆಟ್ಟರ್, ಶ್ರೀ ಪಿ.ಸಿ. ಗದ್ದಿಗೌಡರ್, ಶ್ರೀ ರಮೇಶ್ ಜಿಗಜಿಣಗಿ, ಶ್ರೀ ಈರಣ್ಣ ಕಡಾಡಿ, ಶ್ರೀ ಕ್ಯಾಪ್ಟನ್ ಬ್ರಿಜೇಶ್ ಛೌಟಾ, ಮತ್ತು ಶ್ರೀ ಡಾ ಕೆ ಸುಧಾಕರ್ ಅವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ