ವಿಜಯಪುರ…ಆಲಮಟ್ಟಿ ಜಲಾಶಯದ ಅಧಿಕಾರಿಗಳಿಂದ ಹೈ ಅಲರ್ಟ್ ಘೋಷಣೆ*
: ನೆರೆ ರಾಜ್ಯ ಮಹಾರಾಷ್ಡ್ರ ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದೆ. ಸಹ್ಯಾದ್ರಿ ಪರ್ವತ ಶ್ರೇಣಿಗಳಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ.
ಪರಿಣಾಮ ಹಲವೆಡೆ ರಾಜ್ಯದ ಹಲವೆಡೆ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟ ಮೀರಿ ತುಂಬಿ ಹರಿಯುತ್ತಿವೆ. ಹೀಗಾಗಿ ಉತ್ತರ ಕರ್ನಾಟಕ ಜೀವನಾಡಿ ಕೃಷ್ಣಾ ನದಿಗೆ ಅಪಾರ ನೀರು ಹರಿದು ಬರುತ್ತಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಆಲಮಟ್ಟಿ ಜಲಾಶಯದ ಒಳಹರಿವು ಹೆಚ್ಚಿದ ಕಾರಣ, ಜಲಾಶಯದಿಂದ ಮಂಗಳವಾರ ಬೆಳಿಗ್ಗೆಯಿಂದ ಒಂದು ಲಕ್ಷ ನಾಲ್ವತ್ತು ಸಾವಿರ ಕ್ಯೂಸೆಕ್ ನೀರನ್ನು ನದಿಪಾತ್ರಕ್ಕೆ ಬಿಡಲಾಗುತ್ತಿದೆ.
ಜಲಾಶಯಕ್ಕೆ 1,26,974 ಕ್ಯೂಸೆಕ್ ಒಳ ಹರಿವು ಇದೆ. ಜಲಾಶಯದ ಹೊರಹರಿವು ಬೆಳಿಗ್ಗೆ 1,20,000 ಕ್ಯೂಸೆಕ್ ಇತ್ತು, ನಂತರ 10 ಗಂಟೆ ಸುಮಾರು ಹೊರಹರಿವು 1,40,000 ಕ್ಯೂಸೆಕ್ ಗೆ ಹೆಚ್ಚಿಸಲಾಗಿದೆ.
517.32 ಮೀ ಎತ್ತರದವರೆಗೆ ನೀರು ಇದ್ದು, 95.890 ಟಿಎಂಸಿ ಅಡಿ ನೀರು ಜಲಾಶಯದಲ್ಲಿ ಸಂಗ್ರಹವಾಗಿದೆ. ಈ ಹಿನ್ನೆಲೆಯಲ್ಲಿ ಆಲಮಟ್ಟಿ ಅಧಿಕಾರಿಗಳು ರೆಡ್ ಅಲರ್ಟ್ ಘೋಷಿಸಿ ಎಚ್ಚರಿಕೆ ನೀಡಿದ್ದಾರೆ.
Laxmi News 24×7