Breaking News

ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ…!

Spread the love

ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ…!
ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌
ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಇದರೊಂದಿಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಎಲ್ಲಾ ಸಂಘಟನೆಗಳ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ.
ಮುಂದಿನ ಅಕ್ಟೋಬರ್‌ನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಗೌರ್ವನ್ಮೆಂಟ್‌ ಮಾಂಟೆಸ್ಸರಿ) ತರಗತಿಗಳು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಅವರೊಂದಿಗೆ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಈ ಕುರಿತು ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಬೇಕಿದ್ದು, ಇನ್ನುಂದೆ ಅಂಗನವಾಡಿ ಕಾರ್ಯಕರ್ತೆಯರು, ಚುನಾವಣಾ ಕೆಲಸಗಳಿಂದ ವಿನಾಯಿತಿ ಪಡೆಯಲಿದ್ದಾರೆ. ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಶೀಘ್ರವೇ ಆರಂಭವಾಗಲಿದ್ದು, ಕಾರ್ಯಕರ್ತೆಯರ ಒತ್ತಡವನ್ನು ಇಳಿಸುವ ಸಲುವಾಗಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ.

Spread the love

About Laxminews 24x7

Check Also

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಪಣಗುತ್ತಿಯಲ್ಲಿ ಇಂದು ರಾಜಕಟ್ಟಿ ಏತ್ ನೀರಾವರಿ ಯೋಜನೆಯ ಕಾಮಗಾರಿಯ ಪ್ರಗತಿಯನ್ನು ಸ್ಥಳಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ

Spread the loveಯಮಕನಮರಡಿ ವಿಧಾನಸಭಾ ಕ್ಷೇತ್ರದ ಪಣಗುತ್ತಿಯಲ್ಲಿ ಇಂದು ರಾಜಕಟ್ಟಿ ಏತ್ ನೀರಾವರಿ ಯೋಜನೆಯ ಕಾಮಗಾರಿಯ ಪ್ರಗತಿಯನ್ನು ಸ್ಥಳಕ್ಕೆ ಲೋಕೋಪಯೋಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ