ಸಚಿವರು ಶಾಸಕರೊಂದಿಗೆ ಎರಡನೇ ದಿನವೂ ಸಿಎಂ ಸಭೆ
ಮಹತ್ವದ ವಿಷಯಗಳ ಕುರಿತು ಚರ್ಚೆ
ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಒನ್ ಟು ಒನ್ ಸಭೆಯಲ್ಲಿ ಸಚಿವರ ಕಾರ್ಯವೈಖರಿ ಬಗ್ಗೆ ಸ್ವಪಕ್ಷೀಯ ಶಾಸಕರು ದೂರುಗಳ ಸುರಿಮಳೆಗೈದ ಹಿನ್ನೆಲೆ ಸಿಎಂ ಸಿದ್ಧರಾಮಯ್ಯ ನಿನ್ನೆಯಿಂದ ನಾಲ್ಕು ದಿನಗಳ ಕಾಲ ಸಚಿವರ ಮತ್ತು ಶಾಸಕರ ಸಭೆಗಳನ್ನು ನಡೆಸುತ್ತಿದ್ದು ಇಂದು ಎರಡನೆಯ ದಿನವು ಉತ್ತರ ಕರ್ನಾಟಕದ ಶಾಸಕರೊಂದಿಗೆ ಸಭೆ ನಡೆಸಿದರು.
ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಒನ್ ಟು ಒನ್ ಸಭೆಯಲ್ಲಿ ಸಚಿವರ ಕಾರ್ಯವೈಖರಿ ಬಗ್ಗೆ ಸ್ವಪಕ್ಷೀಯ ಶಾಸಕರು ದೂರುಗಳ ಸುರಿಮಳೆಗೈದ ಹಿನ್ನೆಲೆ ಸಿಎಂ ಸಿದ್ಧರಾಮಯ್ಯ ನಿನ್ನೆಯಿಂದ ನಾಲ್ಕು ದಿನಗಳ ಕಾಲ ಸಚಿವರ ಮತ್ತು ಶಾಸಕರ ಸಭೆಗಳನ್ನು ನಡೆಸುತ್ತಿದ್ದು ಇಂದು ಎರಡನೆಯ ದಿನ, ಕಲಬುರಗಿ ಜಿಲ್ಲೆಯ ಉಸ್ತುವಾರಿ ಸಚಿವರು, ಸಚಿವರು, ಕೆಕೆಆರ್‌ಡಿಬಿ ಅಧ್ಯಕ್ಷರು ಹಾಗೂ ಶಾಸಕರುಗಳ ಜೊತೆ ಸಭೆ ನಡೆಸಿ, ಜಿಲ್ಲಾ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳಡಿ ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮಗಳು ಹಾಗೂ ಅನುದಾನ ಬಳಕೆಯ ಮಾಹಿತಿ ಪಡೆದು, ಬಜೆಟ್ ಘೋಷಣೆಗಳು ಸೇರಿದಂತೆ ಅಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಒಂದಷ್ಟು ಸಲಹೆ ಸೂಚನೆ ನೀಡಿದೆ.
ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಹಾಗೂ ಶಾಸಕರ ಜೊತೆ ಸಭೆ ನಡೆಸಿ, ಗ್ಯಾರಂಟಿ ಯೋಜನೆಗಳು, ಅಭಿವೃದ್ಧಿ ಕಾರ್ಯಕ್ರಮಗಳ ಸ್ಥಿತಿಗತಿಗಳ ಮಾಹಿತಿ ಪಡೆದು, ಸಲಹೆ ಸೂಚನೆಗಳನ್ನು ನೀಡಿದರು.
ಅದೇರೀತಿ ಯಾದಗಿರಿ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಶಾಸಕರ ಜೊತೆ ಸಭೆ ನಡೆಸಿ, ಜಿಲ್ಲೆಯ ವ್ಯಾಪ್ತಿಯಲ್ಲಿ ಕಳೆದೆರಡು ವರ್ಷಗಳಲ್ಲಿ ಪೂರ್ಣಗೊಂಡ ಮತ್ತು ಬಾಕಿಯಿರುವ ಕಾಮಗಾರಿಗಳು ಹಾಗೂ ಅನುದಾನದ ಮಾಹಿತಿ ಪಡೆದು, ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ, ಮುಂದಿನ ದಿನಗಳಲ್ಲಿ ಕೈಗೊಳ್ಳಬಹುದಾದ ಅಭಿವೃದ್ಧಿ ಯೋಜನೆಗಳ ರೂಪುರೇಷೆಯ ಬಗ್ಗೆ ಮಾರ್ಗದರ್ಶನ ನೀಡಿದೆ.
ಇನ್ನು ಬೀದರ್ ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಹಾಗೂ ಶಾಸಕರುಗಳ ಜೊತೆ ಸಭೆ ನಡೆಸಿ, ಜಿಲ್ಲಾ ವ್ಯಾಪ್ತಿಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಿ, ಗ್ಯಾರಂಟಿ ಯೋಜನೆಗಳು, ಬಜೆಟ್ ಘೋಷಣೆಗಳು ಸೇರಿದಂತೆ ಸರ್ಕಾರದ ಕಾರ್ಯಕ್ರಮಗಳನ್ನು ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಸಲಹೆ ಸೂಚನೆ ನೀಡಿದೆ.