Breaking News
Home / ಜಿಲ್ಲೆ / ಕೋಲಾರ / ರಸ್ತೆ ಮಾಡದಿದ್ರೆ ವೋಟ್ ಇಲ್ಲ ಐದು ಸರಿ ಚುನಾವಣೆ ಬಹಿಷ್ಕಾರ ಮಾಡಿದ ಗ್ರಾಮಸ್ಥರು

ರಸ್ತೆ ಮಾಡದಿದ್ರೆ ವೋಟ್ ಇಲ್ಲ ಐದು ಸರಿ ಚುನಾವಣೆ ಬಹಿಷ್ಕಾರ ಮಾಡಿದ ಗ್ರಾಮಸ್ಥರು

Spread the love

ಕೋಲಾರ: ರಸ್ತೆಗಾಗಿ ಗ್ರಾಮ ಪಂಚಾಯಿತಿ ಮತದಾನದಿಂದ ದೂರ ಉಳಿಯುವ ಮೂಲಕ ಗ್ರಾಮಸ್ಥರು ಬಹಿಷ್ಕಾರ ಹಾಕಿದ್ದಾರೆ. ಈ ಮೂಲಕ ಗ್ರಾಮಸ್ಥರು 5 ಚುನಾವಣೆ ಬಹಿಷ್ಕರಿಸಿದಂತಾಗಿದೆ.ಜಿಲ್ಲೆಯ ಮಾಲೂರು ತಾಲೂಕಿನ ಮತಗಟ್ಟೆ ಸಂಖ್ಯೆ 17 ಕಂಬಿಪುರ ಗ್ರಾಮಸ್ಥರು ಮತದಾನದಿಂದ ದೂರ ಉಳಿಯುವ ಮೂಲಕ ಬಹಿಷ್ಕಾರ ಹಾಕಿದರು. ಬೆಳಗ್ಗೆ 9 ಗಂಟೆಯಾದರೂ ಮತ ಕೇಂದ್ರದತ್ತ ಸುಳಿಯದ ಮತದಾರರು, ಬಹಿಷ್ಕಾರ ಹಾಕಿದ್ದಾರೆ. ಈ ಮೂಲಕ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡಿದರ ಹಿನ್ನೆಲೆಯಲ್ಲಿ ಮತಗಟ್ಟೆ ಖಾಲಿ ಖಾಲಿಯಾಗಿತ್ತು. ಇನ್ನೊಂದೆಡೆ ಮತದಾರರಿಗಾಗಿ ಚುನಾವಣಾ ಸಿಬ್ಬಂದಿ ಕಾದು ಕುಳಿತಿದ್ದರು.

ಸ್ಥಳಕ್ಕೆ ಮಾಲೂರು ಪೊಲೀಸರು ಹಾಗೂ ತಹಶೀಲ್ದಾರ್ ಮಂಜುನಾಥ್ ಭೇಟಿ ನೀಡಿ ಗ್ರಾಮಸ್ಥರ ಮನವೊಲಿಸುವ ಕಾರ್ಯ ನಡೆಸಿದರು. ಆದರೂ ಪಟ್ಟು ಬಿಡದ ಗ್ರಾಮಸ್ಥರು ಮತ ಬಹಿಷ್ಕಾರ ಮಾಡಿದ್ದಾರೆ. ಈ ಮೂಲಕ ಗ್ರಾಮಸ್ಥರು 5 ಚುನಾವಣೆಗಳನ್ನು ಬಹಿಷ್ಕರಿಸಿದಂತಾಗಿದೆ. ಈ ಹಿಂದೆ ವಿಧಾನಸಭೆ, ಲೋಕಸಭೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಗ್ರಾಮಸ್ಥರು ಬಹಿಷ್ಕರಿಸಿದ್ದರು. ಗ್ರಾಮಕ್ಕೆ ಸಂಚರಿಸಬೇಕಾದರೆ 20 ಕಿ.ಮೀ.ಸುತ್ತಿಕೊಂಡು ಬರಬೇಕು. ಹೀಗಾಗಿ ಬೇರೆ ರಸ್ತೆ ಮಾಡಿಸಿ ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ.

About Laxminews 24x7

Check Also

ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನ ಬಂಧನ

Spread the loveಕೋಲಾರ: ಬೈಕ್​ನಲ್ಲಿ ಅಕ್ರಮವಾಗಿ ಗಾಂಜಾ (Ganja) ಸಾಗಾಟ ಮಾಡುತ್ತಿದ್ದ ಓರ್ವನನ್ನು ಕ್ಯಾಸಂಬಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆಂದ್ರ ಮೂಲದ‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ