Breaking News

12 ಸಾವಿರ ಉದ್ಯೋಗಿಗಳ ಕಡಿತ; ಟಿಸಿಎಸ್​​ಗೆ ರಾಜ್ಯ ಕಾರ್ಮಿಕ ಇಲಾಖೆಯಿಂದ ಸಮನ್ಸ್

Spread the love

ಬೆಂಗಳೂರು: ಹನ್ನೆರಡು ಸಾವಿರದಷ್ಟು ಬೃಹತ್ ಸಂಖ್ಯೆಯ ಉದ್ಯೋಗಿಗಳನ್ನು ಕೆಲಸದಿಂದ ತಗೆದುಹಾಕುವುದಕ್ಕೆ ಸಂಬಂಧಪಟ್ಟಂತೆ ವಿವರಣೆ ಕೇಳಿ ರಾಜ್ಯ ಕಾರ್ಮಿಕ ಇಲಾಖೆಯು ದೇಶದ ಐಟಿ ವಲಯದ ದಿಗ್ಗಜ ಕಂಪನಿ ಟಿಸಿಎಸ್​ (ಟಾಟಾ ಕನ್ಸಲ್ಟ್ಎನ್ಸಿ ಸರ್ವೀಸಸ್) ಗೆ ಸಮನ್ಸ್ ಜಾರಿ ಮಾಡಿದೆ.

ಅಪಾರ ಸಂಖ್ಯೆಯಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡುವ ಬಗ್ಗೆ ಕಾರಣಗಳನ್ನು ರಾಜ್ಯ ಸರ್ಕಾರಕ್ಕೆ ತಿಳಿಸುವಂತೆ ಸೂಚಿಸಲಾಗಿದೆ. ಅಲ್ಲದೆ, ಟಿಸಿಎಸ್ ಅಧಿಕಾರಿಗಳ ಸಭೆಯನ್ನು ಸಹ ಕರೆಯಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಟಿಸಿಎಸ್ ಕಂಪನಿ 12 ಸಾವಿರದಷ್ಟು ಉದ್ಯೋಗಿಗಳನ್ನು ಕೆಲಸದಿಂದ ತಗೆದುಹಾಕುವ ಕುರಿತು ಘೋಷಣೆ ಮಾಡಿದೆ ಎನ್ನುವ ಸುದ್ದಿಯನ್ನು ಮಾದ್ಯಮಗಳಲ್ಲಿ ಗಮನಿಸಿದ್ದೇನೆ. ಈ ಬಗ್ಗೆ ವಿವರಣೆಗಳನ್ನು ನೀಡುವಂತೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ಕಂಪನಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಲಾಡ್ ಹೇಳಿದ್ದಾರೆ.

ಅಪಾರ ಸಂಖ್ಯೆಯಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡುವ ಸಂದರ್ಭದಲ್ಲಿ ಕಂಪನಿಗಳು ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಬೇಕಾಗುತ್ತದೆ. ಟಿಸಿಎಸ್​​ನಂತಹ ಐಟಿ ಕಂಪನಿಗಳಿಗೆ ಕಾರ್ಮಿಕ ಕಾನೂನುಗಳಿಂದ ವಿನಾಯಿತಿ ನೀಡಲಾಗಿದೆಯಾದರೂ, ಕೆಲವೊಂದು ಷರತ್ತುಗಳು ಅನ್ವಯವಾಗುತ್ತವೆ
ಎಂದು ತಿಳಿಸಿದ ಸಚಿವ ಲಾಡ್, ಟಿಸಿಎಸ್​​ಗೆ ಕಳೆದ 5 ವರ್ಷಗಳಿಂದಲೂ ಕಾರ್ಮಿಕ ಕಾನೂನಿನ ವಿನಾಯಿತಿಯನ್ನು ಮುಂದುವರೆಸಿಕೊಂಡು ಬರಲಾಗುತ್ತಿದೆ ಎನ್ನುವ ಮಾಹಿತಿ ಹಂಚಿಕೊಂಡಿದ್ದಾರೆ.


Spread the love

About Laxminews 24x7

Check Also

ಮಾರ್ಚ್ 3 ಚಂದ್ರ ಗ್ರಹಣದ ಹಿನ್ನೆಲೆ ಈ ಎಲ್ಲಾ ದೇವಾಲಯಗಳು ಬಂದ್!

Spread the loveಬೆಂಗಳೂರು: ಮಾರ್ಚ್ 3ರಂದು ಸಂಭವಿಸಲಿರುವ ವರ್ಷದ ಮೊದಲ ಹಾಗೂ ಹಿಂದು ಪಂಚಾಂಗದ ಪ್ರಕಾರ ವರ್ಷದ ಕೊನೆಯ ಚಂದ್ರಗ್ರಹಣದ ಹಿನ್ನೆಲೆ ರಾಜ್ಯದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ