Breaking News

ನಂದಗಡದಲ್ಲಿ ಬಸ್ಸಿಗಾಗಿ ನರಕ ಯಾತನೆ… ವಿದ್ಯಾರ್ಥಿಗಳ-ಸಾರ್ವಜನಿಕರ ಗೋಳು ಕೇಳುವವರ್ಯಾರು?…

Spread the love

ಖಾನಾಪೂರ ತಾಲೂಕಿನ ನಂದಗಡದಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಬಸ್ಸಿಗಾಗಿ ನರಕ ಯಾತನೆಯನ್ನು ಅನುಭವಿಸುತ್ತಿದ್ದು, ಇವರ ಕಷ್ಟ ಕೇಳುವವರ್ಯಾರು ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಸಾರಿಗೆ ಸಂಸ್ಥೆಯ ದುರ್ಲಕ್ಷ್ಯಕ್ಕೆ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಖಾನಾಪೂರ ತಾಲೂಕಿನ ನಂದಗಡ ಗ್ರಾಮದಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಪ್ರತಿದಿನವೂ ಬಸ್ ಸಮಸ್ಯೆಯಿಂದ ನರಕಯಾತನೆ ಅನುಭವಿಸುತ್ತಿರುವುದು ಈಗ ಸಾಮಾನ್ಯ ದೃಶ್ಯವಾಗಿದೆ. ತಮ್ಮ ವಿದ್ಯಾಭ್ಯಾಸಕ್ಕಾಗಿ ಖಾನಾಪೂರ, ಬೆಳಗಾವಿ ಹಾಗೂ ಹಳಿಯಾಳದತ್ತ ಪ್ರಯಾಣಿಸುವ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರೊಂದಿಗೆ ಅಪಾಯದ ಹಾದಿಯಲ್ಲಿ ಪ್ರಯಾಣಿಸುವಂತಾಗಿದೆ.
ಬಸ್‌ನಲ್ಲಿ ಏನಾದರೂ ಮಾಡಿ ನುಗ್ಗಬೇಕು, ಇಲ್ಲದಿದ್ದರೆ ಶಾಲಾ ಕಾಲೇಜು ವಿದ್ಯಾರ್ಥಿಗಳು ಸಮಯಕ್ಕೆ ತಲುಪದೆ ವಿದ್ಯಾಭ್ಯಾಸದಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ. ಸಾರ್ವಜನಿಕರಿಗೂ ಇದೇ ಪರಿಸ್ಥಿತಿ – ತಮ್ಮ ವ್ಯವಹಾರಗಳು, ಆಸ್ಪತ್ರೆ ಭೇಟಿ ಮುಂತಾದ ಕಾರಣಗಳಿಂದ ಬಸ್‌ ಮೇಲೆ ಅವಲಂಬಿತರಾಗಿದ್ದು, ಸಮಯ ಪಾಲನೆಯ ಕೊರತೆಯಿಂದ ಎಲ್ಲಾ ಕಾರ್ಯಗಳಿಗೆ ವಿಳಂಬವಾಗುತ್ತಿದೆ.
“ಏನಾದರೂ ಮಾಡಿ ಬಸ್ ಸಿಗಬೇಕು” ಎಂಬ ದೃಷ್ಟಿಯಿಂದ ಸಾರ್ವಜನಿಕರು ತಮ್ಮ ಜೀವದ ಹಂಗು ತೊರೆದು ಪ್ರಯಾಣ ಮಾಡುತ್ತಿರುವುದನ್ನು ಈ ವಿಡಿಯೋ ಸ್ಪಷ್ಟವಾಗಿ ತೋರಿಸುತ್ತದೆ. ಇದರ ಕುರಿತು ಸಾರಿಗೆ ಇಲಾಖೆಯ ಅಧಿಕಾರಿಗಳು ಏನು ಕ್ರಮ ಕೈಗೊಳ್ಳುತ್ತಿದ್ದಾರೆ ಎಂಬುದು ಬಹುದೊಡ್ಡ ಪ್ರಶ್ನೆಯಾಗಿದೆ.
ಮತ್ತೊಂದೆಡೆ, ಕೆಲವು ಬಸ್‌ಗಳು ನಿಲ್ದಾಣ ಬಿಟ್ಟು ಮುಂದೆ ಅಥವಾ ಹಿಂದೆ ನಿಲ್ಲಿಸುವ ಮೂಲಕ ಸಾರ್ವಜನಿಕರನ್ನು ಗೊಂದಲಕ್ಕೆ ಈಡಾಗಿಸುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸಲು ತ್ವರಿತ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

Spread the love

About Laxminews 24x7

Check Also

ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸದಿದ್ದರೆ ಶುಕ್ರವಾರ ರಾಜ್ಯಾದ್ಯಂತ ಹೆದ್ದಾರಿ ಬಂದ್

Spread the loveಚಿಕ್ಕೋಡಿ(ಬೆಳಗಾವಿ): ಕಬ್ಬಿಗೆ ಸೂಕ್ತ ದರ ನೀಡುವಂತೆ ಕಳೆದ ಏಳು ದಿನಗಳಿಂದ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ