Breaking News

ರಕ್ಷಕ್‌ ಬುಲೆಟ್‌ ಎಡವಟ್ಟಿನಿಂದ ಯುವಕನ ಕಾಲು ಮುರಿತ…

Spread the love

ರಕ್ಷಕ್‌ ಬುಲೆಟ್‌ ಎಡವಟ್ಟಿನಿಂದ ಯುವಕನ ಕಾಲು ಮುರಿತ…
ಬಿಗ್‌ ಬಾಸ್‌ ಖ್ಯಾತಿಯ ರಕ್ಷಕ್‌ ಬುಲೆಟ್‌ ಎಡವಟ್ಟಿನಿಂದ ಯುವಕನ ಕಾಲು ಮುರಿತ ಆಗಿರುವ ಘಟನೆ ನಡೆದಿದೆ.
ಗುರುವಾರ ಬೆಳಗ್ಗೆ 11:30ರ ಸುಮಾರಿಗೆ ಅಪಘಾತ ಸಂಭವಿಸಿತ್ತು. ರಕ್ಷಕ್‌ ಬುಲೆಟ್‌ ಅಜಾಗರೂಕತೆಯಿಂದ ಕಾರು ಚಲಾಯಿಸಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ವೇಣುಗೋಪಾಲ ಕಾಲು ಮುರಿದುಕೊಂಡ ಯುವಕ.
ಯುವಕನ ಬೈಕ್ ಮತ್ತು ರಕ್ಷಕ್ ಕಾರು ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಯುವಕನ ಎಡಗಾಲಿನ ಮೂಳೆ ಮುರಿತವಾಗಿದೆ.
ಶಿಡ್ಲಘಟ್ಟ ಮೂಲದ ಯುವಕ ವೇಣುಗೋಪಾಲ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ. ಸದ್ಯ ಹೆಣ್ಣೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ