Breaking News

ಬಾಕಿ ಜಮೀನುಗಳ ಭೂಸ್ವಾಧೀನ ಕಾರ್ಯ ಪೂರ್ಣಗೊಳಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ:ಸಂಸದ ಶೆಟ್ಟರ ಸೂಚನೆ!!

Spread the love

ಬಾಕಿ ಜಮೀನುಗಳ ಭೂಸ್ವಾಧೀನ ಕಾರ್ಯ ಪೂರ್ಣಗೊಳಿ
ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ:ಸಂಸದ ಶೆಟ್ಟರ ಸೂಚನೆ!!
ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ
ಬಾಕಿ ಜಮೀನುಗಳ ಭೂಸ್ವಾಧೀನ ಕಾರ್ಯ ಪೂರ್ಣಗೊಳಿ
ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ:ಸಂಸದ ಶೆಟ್ಟರ ಸೂಚನೆ
ಬೆಳಗಾವಿ ವಿಮಾನ ನಿಲ್ದಾಣದ ಅಭಿವೃದ್ಧಿಯ ಕುರಿತು ಚರ್ಚೆ
ಬೆಳಗಾವಿ – ಕಿತ್ತೂರು – ಧಾರವಾಡ ನಡುವೆ ನೂತನ ರೇಲ್ವೆ ಮಾರ್ಗಕ್ಕೆ ಬೇಕಾಗುವ ಬಾಕಿ ಜಮೀನುಗಳ ಭೂಸ್ವಾಧೀನ ಕಾರ್ಯವನ್ನು ಸಹ ಪೂರ್ಣಗೊಳಿಸುವಂತೆ ಸಂಬಂಧಿಸಿದ ರೈಲ್ವೆ ಇಲಾಖೆಗೆ ಮಾಜಿ ಸಿಎಂ ಹಾಗೂ ಸಂಸದ ಜಗದೀಶ ಶೆಟ್ಟರ ಸೂಚನೆ ನೀಡಿದರು
ಶನಿವಾರ ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೆಳಗಾವಿ ಡಿಸಿ ಮಹ್ಮದ ರೋಶನ್ ಅವರ ಉಪಸ್ಥಿತಿಯಲ್ಲಿ ಜರುಗಿದ ಬೆಳಗಾವಿ ಲೋಕಸಭಾ ವ್ಯಾಪ್ತಿಯಲ್ಲಿ ಕೇಂದ್ರ ಸರಕಾರದ ವಿವಿಧ ಇಲಾಖೆಗಳಾದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ, ವಿಮಾನಯಾನ ಇಲಾಖೆ, ಕೆಎಐಡಿಬಿ ಇಲಾಖೆಗಳ ವತಿಯಿಂದ ಕೈಕೊಳ್ಳುತ್ತಿರುವ ವಿವಿಧ ಅಭಿವೃದ್ಧಿ ಪರ ಕಾಮಗಾರಿಗಳ ಅನುಷ್ಠಾನದ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು.
ಬೆಳಗಾವಿ – ಕಿತ್ತೂರು – ಧಾರವಾಡ ನಡುವೆ ನೂತನ ರೇಲ್ವೆ ಮಾರ್ಗಕ್ಕೆ ಸುಮಾರು 1200 ಎಕರೆ ಜಮೀನು ಈ ಯೋಜನೆಯ ಅನುಷ್ಠಾನಕ್ಕೆ ಅಗತ್ಯವಿದೆ ಈ ಬಗ್ಗೆ ಇಲ್ಲಿಯವರೆಗೆ ಕಿತ್ತೂರು -ದೇಸೂರು ನಡುವೆ ಆದ ಭೂಸ್ವಾಧೀನ ಪ್ರಕ್ರೀಯ ಬಗ್ಗೆ ಅಧಿಕಾರಗಳು ವಿವರಿಸಿ ಸುಮಾರು 407.24 ಎಕರೆ ಭೂಸ್ವಾಧಿನ ಪ್ರಕ್ರೀಯ ಕುರಿತು ಅಂತಿಮ ಅಧಿಸೂಚನೆ ಹಂತ ತಲುಪಿರುವ ಬಗ್ಗೆ ಸಭೆಗೆ ಅಧಿಕಾರಿಗಳು ಸಭೆಗೆ ತಿಳಿಸಿದರು, ಆದಷ್ಟು ಬೇಗನೆ ಬಾಕಿ ಜಮೀನುಗಳ ಭೂಸ್ವಾಧೀನ ಕಾರ್ಯ ಸಹ ಪೂರ್ಣಗೊಳಿಸುವಂತೆ ಸಂಸದ ಜಗದೀಶ ಶೆಟ್ಟರ ಸೂಚಿಸಿದರು.
ಬೆಳಗಾವಿ ಮಹಾನಗರದ ಸುತ್ತಲು (ರಿಂಗ್ ರೋಡ್) ಬೈಪಾಸ್ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಗತಿಯನ್ನು ಅವಲೋಕಿಸಲಾಯಿತು. ಇದರ ಅನುಷ್ಠಾನದಲ್ಲಿ ತಲೆದೋರಿರುವ ಸಮಸ್ಯೆಗಳನ್ನು ನಿವಾರಿಸುವ ಮತ್ತು ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವ ಬಗ್ಗೆ ಹಾಜರಿದ್ದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಯೋಜನಾ ನಿರ್ದೇಶಕರಿಗೆ ಸೂಚಿಸಲಾಯಿತು.
ಬೆಳಗಾವಿ ವಿಮಾನ ನಿಲ್ದಾಣದ ಅಭಿವೃದ್ಧಿಯ ಕುರಿತು ಅವಶ್ಯಕವಾದ ಭೂಸ್ವಾಧೀನ ಬಗ್ಗೆ ವಿಚಾರಿಸಿ ಬರುವ ದಿನಗಳಲ್ಲಿ ವಿಮಾನಯಾನ ಸೇವೆ ಪಡೆಯುವ ಜನಸಂಖ್ಯೆ ಅಧೀಕವಾಗಲಿದೆ. ಈ ಹಿನ್ನಲೆಯಲ್ಲಿ ಕಾಲಕ್ಕೆ ಅನುಗುಣವಾಗಿ ವಿಮಾನಯಾನ ಅಭಿವೃದ್ಧಿ ಅವಶ್ಯಕ ಎಂದರು ಪ್ರಗತಿ ಪರಶೀಲನಾ ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ, ಸಹಾಯಕ ಆಯುಕ್ತ ಶ್ರವಣ ನಾಯ್ಕ, ವಿಶೇಷ ಭೂಸ್ವಾಧೀನ ಅಧಿಕಾರಿ ರಾಜಶ್ರೀ ಜೈನಾಪೂರ ಮತ್ತು ಚೌಹಾಣ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಭೂವನೇಶ ಕುಮಾರ ಸೇರಿದಂತೆ ವಿಮಾನಯಾನ ಪ್ರಾಧಿಕಾರದ ಅಧಿಕಾರಿಗಳು ಹಾಜರಿದ್ದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ