Breaking News

ಶಾಲೆಯ ನೀರಿನ‌ ಟ್ಯಾಂಕ್​ಗೆ ವಿಷ ಬೆರೆಸಿದ ಕೇಸ್​ ತನಿಖೆಗೆ 3 ತಂಡ ರಚನೆ

Spread the love

ಶಿವಮೊಗ್ಗ, ಆಗಸ್ಟ್​ 02: ಮುಖ್ಯಮಂತ್ರಿ ಸಿದ್ದರಾಮಯ್ಯಯವರ ಸೂಚನೆ ಬೆನ್ನಲ್ಲೇ ಸರ್ಕಾರಿ ಶಾಲೆಯ (Shivamogga Government School) ನೀರಿನ‌ ಟ್ಯಾಂಕ್​ಗೆ ಕೀಟನಾಶಕ (Poison) ಬೆರೆಸಿದ ಪ್ರಕರಣದ ತನಿಖೆಯನ್ನು ಶಿವಮೊಗ್ಗ ಪೊಲೀಸರು ಚುರುಕುಗೊಳಿಸಿದ್ದಾರೆ. ಪ್ರಕರಣದ ತನಿಖೆಗಾಗಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಿಥುನ್​ ಕುಮಾರ್ ಅವರು ತೀರ್ಥಹಳ್ಳಿ ಡಿವೈಎಸ್​ಪಿ ನೇತೃತ್ವದಲ್ಲಿ 18 ಪೊಲೀಸ್ ಸಿಬ್ಬಂದಿ ಒಳಗೊಂಡಿರುವ ಮೂರು ತಂಡಗಳನ್ನು ರಚಿಸಿದ್ದಾರೆ.

ಟವರ್ ಡಂಪ್, ಸಿಸಿಟಿವಿ ಪರಿಶೀಲನೆಗೆ ಐದು ಮಂದಿ ಸಿಬ್ಬಂದಿ, ಗ್ರಾಮದ ಸುತ್ತಮುತ್ತ ಮಾಹಿತಿ ಸಂಗ್ರಹಣೆಗೆ 8 ಮಂದಿ ಪೊಲೀಸರು, ಅನುಮಾನಸ್ಪದ ವ್ಯಕ್ತಿಗಳ ವಿಚಾರಣೆಗಾಗಿ ಐವರು ಪೊಲೀಸರನ್ನು ನಿಯೋಜನೆ ಮಾಡಿದ್ದಾರೆ. ಶಿವಮೊಗ್ಗ ಪೊಲೀಸರು ಪ್ರಕರಣವನ್ನು ಸವಾಲಾಗಿ ತೆಗೆದುಕೊಂಡಿದ್ದಾರೆ.

ಪ್ರಕರಣ ಸಂಬಂಧ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, ಅಧಿಕಾರಿಗಳು ಈಗಾಗಲೇ ಶಾಲೆಗೆ ಭೇಟಿ ನೀಡಿದ್ದಾರೆ. ನೀರಿನ ಟ್ಯಾಂಕ್​ನಲ್ಲಿ ಕಳೆ ನಾಶಕ ಹಾಕಿರುವ ಶಂಕೆ ಇದೆ. ಘಟನೆ ನಡೆದ ದಿನದಂದು ಶಾಲೆಯಲ್ಲಿ 18 ಜನ ಮಕ್ಕಳಿದ್ದರು. ಅವರ ಆರೋಗ್ಯ ತಪಾಸಣೆ ಆಗಿದೆ. ಮಕ್ಕಳ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಆಗಿಲ್ಲ. ಘಟನೆ ನಡೆದ ಮರುದಿನ ಶಾಲೆಗೆ ರಜೆ ನೀಡಲಾಗಿತ್ತು ಎಂದು ತಿಳಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ