ಮಹಾರಾಷ್ಟ್ರ ಏಕೀಕರಣ ಯುವ ಸಮಿತಿಯಿಂದ ವಿವಿಧ ಶಾಲೆಗಳಲ್ಲಿ ಶೈಕ್ಷಣಿಕ ಸಾಮಗ್ರಿಗಳ ವಿತರಣೆ
ಮಹಾರಾಷ್ಟ್ರ ಏಕೀಕರಣ ಯುವ ಸಮಿತಿಯಿಂದ ವಿವಿಧ ಶಾಲೆಗಳಲ್ಲಿ ಶೈಕ್ಷಣಿಕ ಸಾಮಗ್ರಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ, ಮಹಾರಾಷ್ಟ್ರ ಏಕೀಕರಣ ಯುವ ಸಮಿತಿಯು ಪ್ರತಿವರ್ಷ ಪ್ರಥಮ ತರಗತಿಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಣೆ ಮಾಡಿದೆ.
ಪ್ರತಿವರ್ಷದಂತೆ ಈ ಬಾರಿಯೂ ಬೆಳಗಾವಿ ತಾಲೂಕಿನ ತುರಮುರಿ, ಕಲ್ಲೇಹೋಳ, ಕೊಣೇವಾಡಿ, ಬಾಚಿ, ಬಸರಿಕಟ್ಟಿ, ಅಷ್ಟೆ, ಚಂದಗಡ್, ಖಣಗಾವ್ ಹಾಗೂ ಮುಚ್ಚಂಡಿ ಗ್ರಾಮದ ಮರಾಠಿ ಪ್ರಾಥಮಿಕ ಶಾಲೆಗಳಲ್ಲಿ ಶೈಕ್ಷಣಿಕ ಉಪಕ್ರಮಗಳ ನಡೆಸಲಾಯಿತು. ಈ ಉಪಕ್ರಮ ಎಂಟನೇ ವರ್ಷಕ್ಕೆ ಕಾಲಿಟ್ಟಿದ್ದು, ಈ ಬಾರಿ ಬೆಳಗಾವಿ, ಖಾನಾಪುರ, ನಿಪ್ಪಾಣಿ ಭಾಗದ ಸುಮಾರು 300 ಶಾಲೆಗಳಲ್ಲಿ ಈ ಉಪಕ್ರಮ ಹಮ್ಮಿಕೊಳ್ಳಲಾಗಿದೆ.
ತುರಮುರಿ ಮರಾಠಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ಸಾಮಗ್ರಿಗಳ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ಮಹಾರಾಷ್ಟ್ರ ಏಕೀಕರಣ ಯುವ ಸಮಿತಿಯ ಪದಾಧಿಕಾರಿಗಳಾದ ಅಶ್ವಜಿತ್ ಚೌಧರಿ, ನಿಖಿಲ್ ದೇಸಾಯಿ, ಮಹೇಂದ್ರ ಜಾಧವ್, ಶಾಲಾ ಸುಧಾರಣಾ ಸಮಿತಿಯ ಅಧ್ಯಕ್ಷ ನಾಗೇಶ್ ಬೆಳಗಾವಕರ, ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರ ವರ್ಗ ಉಪಸ್ಥಿತರಿದ್ದರು.
ಬಾಚಿ ಮರಾಠಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀಶೈಲ ಮಾಸೇಕರ್, ಸಾಗರ್ ಜಾಧವ್, ನಿಖಿಲ್ ದೇಶಾಯಿ, ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರ ವರ್ಗ ಉಪಸ್ಥಿತರಿದ್ದರು.
ಮುಚ್ಚಂಡಿ, ಅಷ್ಟೆ, ಚಂದಗಡ್ ಮತ್ತು ಖಣಗಾವ್ ಶಾಲೆಗಳಲ್ಲಿ ಕೂಡ ಶೈಕ್ಷಣಿಕ ಸಾಮಗ್ರಿಗಳ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ಮಹಾರಾಷ್ಟ್ರ ಏಕೀಕರಣ ಯುವ ಸಮಿತಿಯ ಉಪಾಧ್ಯಕ್ಷ ಸಿದ್ಧಾರ್ಥ ಚೌಗುಲೆ ಪದಾಧಿಕಾರಿಗಳಾದ ರೋಹನ್ ಕುಂಡೆಕರ, ಜೋತಿಬಾ ಪಾಟೀಲ ಮತ್ತು ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರ ವರ್ಗ ಭಾಗವಹಿಸಿದ್ದರು.
ಬಸರಿಕಟ್ಟಿ ಮರಾಠಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾರಾಷ್ಟ್ರ ಏಕೀಕರಣ ಯುವ ಸಮಿತಿಯ ಕಾರ್ಯಕರ್ತರಾದ ಪರಶುರಾಮ ನಾಗರೋಳಿ, ಕುಮಾರ್ ಶೇರೇಕರ್, ಯುವರಾಜ್ ಮುತ್ತಗೆಕರ, ಶಾಲಾ ಸುಧಾರಣಾ ಸಮಿತಿಯ ಅಧ್ಯಕ್ಷ ಕೃಷ್ಣ ಕೊಂಡಸಕೊಪ್ಪ, ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರ ವರ್ಗ ಉಪಸ್ಥಿತರಿದ್ದರು.