Breaking News

ಪಡಿತರ ಅಕ್ಕಿ ಸಾಗಾಟ; ಇಬ್ಬರ ಬಂಧನ

Spread the love

ಪಡಿತರ ಅಕ್ಕಿ ಸಾಗಾಟ; ಇಬ್ಬರ ಬಂಧನ
ಅಕ್ರಮವಾಗಿ ಅಕ್ಕಿ ಸಂಗ್ರಹಿಸಿ ಸಾಗಾಟ ಮಾಡುವಾಗ ಖಚಿತ ಮಾಹಿತಿ ಆಧರಿಸಿ ಪೊಲೀಸರು ಹಾಗೂ ಆಹಾರ ನಿರೀಕ್ಷಕರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಿಟ್ಟಿನಹಳ್ಳಿ ಗ್ರಾಮದಲ್ಲಿ ನಡೆದಿದೆ.‌
ಅಹ್ಮದ ನಾಗಾವಿ ಹಾಗೂ ತುಕಾರಾಂ ಭಜಂತ್ರಿ ಬಂಧಿತ ಆರೋಪಿಗಳು.
ಬಂಧಿತರಿಂದ 50 ಸಾವಿರ ಮೌಲ್ಯದ ಟಂಟಂ ಗೂಡ್ಸ್, 36,090 ಮೌಲ್ಯದ 1210 ಕೆಜಿ ಅಕ್ಕಿ ಹಾಗೂ ಸ್ಯಾಂಪಲ್‌ಗಾಗಿ ತೆಗೆದ 58 ರೂಪಾಯಿ ಮೌಲ್ಯದ 2 ಕೆಜಿ ಅಕ್ಕಿ ಸೇರಿದಂತೆ ಒಟ್ಟು 85,148 ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಅಲ್ಲದೇ, ಮುಂದಿನ ಕಾನೂನು ಕ್ರಮತೆಗೆದುಕೊಂಡಿದ್ದಾರೆ. ಈ ಕುರಿತು ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ