ಕೊಪ್ಪಳ, ಆಗಸ್ಟ್ 04: ಅನ್ಯ ಧರ್ಮದ ಯುವತಿಯನ್ನ ಪ್ರೀತಿಸಿದಕ್ಕೆ ಮುಸ್ಲಿಂ ಯುವಕನಿಂದ ಹಿಂದೂ ಯುವಕನ ಕೊಲೆ (kill) ನಡೆದಿರುವಂತಹ ಘಟನೆ ಭಾನುವಾರ ರಾತ್ರಿ ಕೊಪ್ಪಳ (Koppal) ನಗರದ ವಾರ್ಡ್ 3ರ ಮಸೀದಿ ಮುಂಭಾಗದಲ್ಲಿ ನಡೆದಿದೆ. ಸಾದಿಕ್ ಕೋಲ್ಕಾರ್ ಎಂಬುವನಿಂದ ಗವಿಸಿದ್ದಪ್ಪ ನಾಯಕ್ನ ಕೊಲೆ ಮಾಡಲಾಗಿದೆ. ಸದ್ಯ ಗವಿಸಿದ್ದಪ್ಪ ನಾಯಕ್ ತಂದೆ ನಿಂಗಜ್ಜ ಟಣಕನಲ್ ಅವರು ಆರೋಪಿ ಸಾದಿಕ್ ಸೇರಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ.
ಕೊಲೆ ಮಾಡಿ ಶರಣಾದ ಆರೋಪಿ
ಗವಿಸಿದ್ದಪ್ಪನನ್ನ ಕೊಲೆ ಮಾಡಿದ ಸಾದಿಕ್ ನೇರವಾಗಿ ಬಂದು ನಗರ ಠಾಣೆಗೆ ಶರಣಾಗಿದ್ದಾನೆ. ಆತ ಸೇರಿದಂತೆ ನಾಲ್ವರ ವಿರುದ್ಧ ಸೆಕ್ಷನ್ 103(1) ಬಿಎನ್ಎಸ್ 2023 ಕಲಂ 3(2)ವಿ, ಎಸ್ಸಿ-ಎಸ್ಟಿ ಕಾಯ್ದೆ 1989 ಅಡಿಯಲ್ಲಿ ದೂರು ದಾಖಲಾಗಿದೆ.ಈ ಕೊಲೆಗೆ ಕಾರಣವಾಗಿದ್ದು ಗವಿಸಿದ್ದಪ್ಪ ಮುಸ್ಲಿಂ ಯುವತಿಯೊಬ್ಬಳನ್ನು ಪ್ರೀತಿಸಿದ್ದು. ಕಳೆದ ಎರಡು ವರ್ಷಗಳಿಂದ ಗವಿಸಿದ್ದಪ್ಪ, ಗೌರಿ ಅಂಗಳ ಏರಿಯಾದ ಅಪ್ರಾಪ್ತ ಯುವತಿಯನ್ನು ಪ್ರೀತಿಸುತ್ತಿದ್ದನಂತೆ. ಜೊತೆಗೆ ಮನೆ ಬಿಟ್ಟು ಓಡಿ ಸಹ ಹೋಗಿದ್ದರು. ಈ ಕುರಿತಂತೆ ನಾಲ್ಕೈದು ಬಾರಿ ಪಂಚಾಯತಿ ಸಹ ಮಾಡಲಾಗಿತ್ತು. ಆದರೂ ಸಹ ಗವಿಸಿದ್ದಪ್ಪ ಹಾಗೂ ಮುಸ್ಲಿಂ ಯುವತಿಯ ನಡುವೆ ಪ್ರೀತಿ ಮುಂದುವರೆದಿತ್ತು. ಹೀಗಾಗಿ ಗವಿಸಿದ್ದಪ್ಪನನ್ನು ಸಾದಿಕ್ ಮಚ್ಚಿನಿಂದ ಕೊಲೆ ಮಾಡಿದ್ದಾನೆ.
Laxmi News 24×7