ಬೆಂಗಳೂರು, ಆಗಸ್ಟ್ 4: ವೇತನ ಪರಿಷ್ಕರಣೆ, 20 ತಿಂಗಳ ಹಿಂಬಾಕಿ ವೇತನ ಬಿಡುಗಡೆ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಬಿಎಂಟಿಸಿ (BMTC), ಕೆಎಸ್ಆರ್ಟಿಸಿ (KSRTC) ನೌಕರರು ಪಟ್ಟು ಹಿಡಿದಿದ್ದಾರೆ. ಸರ್ಕಾರಕ್ಕೆ ಗಡುವಿನ ಮೇಲೆ ಗಡುವು ಕೊಟ್ಟರೂ ಬೇಡಿಕೆ ಈಡೇರಿಸಿಲ್ಲ. ಹೀಗಾಗಿ ಆಗಸ್ಟ್ 5 ರಿಂದ ಬಸ್ ಸಂಚಾರ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಇದೇ ವಿಚಾರವಾಗಿ ಬೆಂಗಳೂರಿನ ಗಾಂಧಿನಗರದ ಎಐಟಿಯುಸಿ ಕಚೇರಿಯಲ್ಲಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ್ ಸುಬ್ಬರಾವ್ ಭಾನುವಾರ ಸಭೆ ನಡೆಸಿದ್ದಾರೆ. ಸಭೆಯಲ್ಲಿ, ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯ 6 ಸಂಘಟನೆಗಳು ಭಾಗಿಯಾಗಿದ್ದವು
ಮುಷ್ಕರ ಇಲ್ಲ, ಆದರೆ ಬಸ್ ಸಂಚಾರ ಸ್ಥಗಿತ!
ಸಭೆ ಬಳಿಕ ಮಾತನಾಡಿದ ಅನಂತ್ ಸುಬ್ಬರಾವ್, ನಾಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕಕ್ಕೆ ಬರುತ್ತಿರುವುದರಿಂದ ಸಾರಿಗೆ ನೌಕರರು ಮುಷ್ಕರ ಮಾಡುತ್ತಿಲ್ಲ. ಬದಲಿಗೆ ಬಸ್ ಸಂಚಾರ ಸ್ಥಗಿತಗೊಳಿಸಿ ಎಲ್ಲ 1.15 ಲಕ್ಷ ಸಿಬ್ಬಂದಿ ಮನೆಯಲ್ಲಿರುತ್ತಾರೆ ಎಂದಿದ್ದಾರೆ.
ಕೂಡಲೇ ಸರ್ಕಾರ 38 ತಿಂಗಳ ಅರಿಯರ್ಸ್ ಕೊಡಬೇಕು. ಶಕ್ತಿ ಯೋಜನೆಯನ್ನು ನಾವು ಯಶಸ್ವಿಯಾಗಿ ನಿರ್ವಹಿಸುತ್ತಿದ್ದೇವೆ. ಆದರೆ ಸಾರಿಗೆ ಸಿಬ್ಬಂದಿಗೆ ಸಿದ್ದರಾಮಯ್ಯ ಸರ್ಕಾರ ವಿಶ್ವಾಸ ದ್ರೋಹ ಮಾಡಿದೆ ಎಂದು ಅನಂತ್ ಸುಬ್ಬರಾವ್ ಕಿಡಿಕಾರಿದರು
Laxmi News 24×7