Breaking News

ರಸ್ತೆಗಳ ದುರಸ್ಥಿಗೆ ಆಗ್ರಹಿಸಿ ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ ಮಳೆಯಿಂದ ಬೆಳಗಾವಿಯಲ್ಲಿ ಹಾಳಾಗಿರುವ ರಸ್ತೆಗಳ ದುರಸ್ಥಿಗೆ ಆಗ್ರಹಿಸಿ ಮೇಯರ ಅವರಿಗೆ ಆಮ್ ಆದ್ಮಿ ಪಾರ್ಟಿ ಮನವಿ!!

Spread the love

ರಸ್ತೆಗಳ ದುರಸ್ಥಿಗೆ ಆಗ್ರಹಿಸಿ ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ
ಮಳೆಯಿಂದ ಬೆಳಗಾವಿಯಲ್ಲಿ ಹಾಳಾಗಿರುವ ರಸ್ತೆಗಳ ದುರಸ್ಥಿಗೆ ಆಗ್ರಹಿಸಿ ಮೇಯರ ಅವರಿಗೆ ಆಮ್ ಆದ್ಮಿ ಪಾರ್ಟಿ ಮನವಿ!!
ಮಳೆಯಿಂದ ಬೆಳಗಾವಿಯಲ್ಲಿ ಹಾಳಾಗಿರುವ ರಸ್ತೆಗಳ ದುರಸ್ಥಿಗೆ ಆಗ್ರಹ
ಮಹಾನಗರ ಪಾಲಿಕೆ ಎದುರು ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ
ಮೇಯರ ಮಂಗೇಶ ಪವಾರ ಅವರಿಗೆ ಕಾರ್ಯಕರ್ತರಿಂದ ಮನವಿ
ರಸ್ತೆ ಗುಣಮಟ್ಟ ಕಾಪಾಡದ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಒತ್ತಾಯ
ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆಯ ಮೇಲೆ ಬಿದ್ದಿರುವ ದೊಡ್ಡ ದೊಡ್ಡ ಗುಂಡಿಗಳ ದುರಸ್ಥಿಗೆ ಆಗ್ರಹಿಸಿ ಮಹಾನಗರ ಪಾಲಿಕೆಯ ಎದುರು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸೋಮವಾರ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಬೆಳಗಾವಿ ಮಹಾನಗರ ಪಾಲಿಕೆ ಆವರಣದಲ್ಲಿ ಮಹಾನಗರದ ರಸ್ತೆಗಳೆಲ್ಲವೂ ಮಳೆಗೆ ರಸ್ತೆಗಳು ಸಂಪೂರ್ಣ ಹಾಳಾಗಿ ಹೋಗಿವೆ. ಗಣೇಶ ಹಬ್ಬದ ಒಳಗಾಗಿ ನಗರದ ರಸ್ತೆಗಳನ್ನು ದುರಸ್ತಿ ಮಾಡಬೇಕು. ಸದ್ಯ ಬೆಳಗಾವಿ ನಗರದ ರಸ್ತೆಯ ಮೇಲೆ ವಾಹನ ಸವಾರರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ಗುಣಮಟ್ಟ ಕಾಪಾಡದ ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಆಮ್ ಆದ್ಮಿ ಪಕ್ಷದಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿ ಮಹಾನಗರ ಪಾಲಿಕೆಯ ಮೇಯರ ಮಂಗೇಶ ಪವಾರ ಅವರಿಗೆ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಮೇಯರ್ ಮಂಗೇಶ ಅವರು ಕಾಲ ಮೀತಿಯೊಳಗೆ ಮಹಾನಗರದಲ್ಲಿ ಹಾಳಾಗಿರುವ ರಸ್ತೆಗಳ ದುರಸ್ಥಿ ಮಾಡಲಾಗುವುದು ಎಂದು ಪ್ರತಿಭಟನಾಕಾರರಿಗೆ ಬರವಸೆ ನೀಡಿದರು
ಆಮ್ ಆದ್ಮಿ ಪಾರ್ಟಿಯ ಯುವ ಮುಖಂಡ ಜುನೈದ ಪಾಶಾ ಮಾತನಾಡಿ ಬೆಳಗಾವಿ ನಗರದ ರಸ್ತೆಗಳೆಲ್ಲ ಹಾಳಾಗಿ ಹೋಗಿವೆ. ರಸ್ತೆಯ ಮೇಲೆ ವಾಹನ ಸವಾರರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆ ಗುಣಮಟ್ಟ ಕಾಪಾಡದ ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಆಮ್ ಆದ್ಮಿ ಪಕ್ಷದಿಂದ ಮುಂದಿನ ದಿನಗಳಲ್ಲಲಿ ಉಗ್ರ ಹೋರಾಟ ನಡೆಸಲಾಗುವುದು, ಆಮ್ ಆದ್ಮಿ ಪಾರ್ಟಿಯಿಂದ ಧರಣಿ ಕುಳಿತುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು
ವಿಜಯ ಪಾಟೀಲ್, ಜುನೈದ ಪಾಶಾ, ಅಖಿಲಾ ಪಠಾಣ ಸೇರಿದಂತೆ ಪಕ್ಷದ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ