Breaking News

ರಾಜ್ಯದಲ್ಲಿ ಮತ್ತೆ ಮಳೆ ಚುರುಕಾಗುತ್ತಿದೆ.

Spread the love

ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮುಂಗಾರು ಮತ್ತೆ ಚುರುಕುಗೊಂಡಿದೆ. ಆಗಸ್ಟ್ 7ರ ವರೆಗೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆರೆಂಜ್ ಅಲರ್ಟ್: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಯೆಲ್ಲೋ ಅಲರ್ಟ್: ಬೆಂಗಳೂರು ನಗರ, ರಾಮನಗರ, ಮೈಸೂರು, ಮಂಡ್ಯ, ದಾವಣಗೆರೆ, ಚಾಮರಾಜನಗರ, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ವಿಜಯನಗರ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನು ಹೊರತುಪಡಿಸಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಮಳೆ?: ಕುಂದಾಪುರ, ಗೇರುಸೊಪ್ಪ, ಆಗುಂಬೆ, ಉಡುಪಿ, ಶಿರಾಲಿ, ಧರ್ಮಸ್ಥಳ, ಶೃಂಗೇರಿ, ಸಿದ್ದಾಪುರ, ಕುಮಟಾ, ಕೊಟ್ಟಿಗೆಹಾರ, ಕಾರ್ಕಳ, ಕೋಟಾ, ಮಂಕಿ, ಕೃಷ್ಣರಾಜಪೇಟೆ, ಕಮ್ಮರಡಿ, ಹಾವೇರಿ, ಬೇಳೂರು, ಬನವಾಸಿ, ಉಪ್ಪಿನಂಗಡಿ, ಹೊನ್ನಾವರ, ಗೋಕರ್ಣ, ಕ್ಯಾಸಲ್​​ರಾಕ್ ಹಾಗೂ ಭಾಗಮಂಡಲದಲ್ಲಿ ಭಾನುವಾರ ಮಳೆಯಾಗಿದೆ.

ರಾಜಧಾನಿಯಲ್ಲಿ ಹೇಗಿದೆ ವಾತಾವರಣ?: ಬೆಂಗಳೂರಿನಲ್ಲಿ ಕೂಡ ಭಾನುವಾರ ರಾತ್ರಿಯಿಂದಲೇ ಜೋರು ಮಳೆ ಶುರುವಾಗಿದ್ದು, ಈಗ ಮೋಡ ಕವಿದ ವಾತಾವರಣವಿದ್ದು, ಸಂಜೆಯ ವೇಳೆಗೆ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ನಗರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹೆಚ್​​ಎಎಲ್​ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ