Breaking News

ರಾಜಕೀಯ ಹೋರಾಟ ಕೋರ್ಟ್ ಹೊರಗೆ ಇಟ್ಟುಕೊಳ್ಳಿ: ಶಿವಾನಂದ ಪಾಟೀಲ್ ಗೆ ಸುಪ್ರೀಂ ಚಾಟಿ

Spread the love

ನವದೆಹಲಿ, (ಆಗಸ್ಟ್​​ 04): ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದ ಸಚಿವ ಶಿವನಾಂದ ಪಾಟೀಲ್ (Shivanand Patil) ಅವರ ನಡೆಗೆ ಸುಪ್ರೀಂ ಕೋರ್ಟ್ (supreme court) ಚಾಟಿ ಬೀಸಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸಚಿವ ಶಿವಾನಂದ ಪಾಟೀಲ್ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡು ವಜಾಗೊಳಿಸಿದೆ. ವಿಚಾರಣೆ ವೇಳೆ

, ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು, “ನಿಮ್ಮ ರಾಜಕೀಯ ಹೋರಾಟಗಳನ್ನು ನ್ಯಾಯಾಲಯದ ಹೊರಗೆ ಮಾಡಿ, ಇಲ್ಲಿಗೆ ತರಬೇಡಿ,” ಎಂದು ಖಾರವಾಗಿ ಹೇಳುವ ಮೂಲಕ ರಾಜಕೀಯ ಪ್ರಕರಣಗಳನ್ನು ನ್ಯಾಯಾಲಯಕ್ಕೆ ತರುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ ಪ್ರಕರಣ ಸಂಬಂಧ ಸಚಿವ ಶಿವನಾಂದ ಪಾಟೀಲ್ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಅರ್ಜಿಯನ್ನ ವಜಾಗೊಳಿಸಿತ್ತು.

ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ್ದರು. ಈ ಅರ್ಜಿಯನ್ನಿಂದು ಸಿಜೆಐ ಬಿ.ಆರ್ ಗವಾಯಿ ನೇತೃತ್ವದ ಪೀಠ ವಿಚಾರಣೆ ನಡೆಸಿತುಈ ವೇಳೆ ನಿಮ್ಮ ರಾಜಕೀಯ ಹೋರಾಟ ಕೋರ್ಟ್ ಹೊರಗೆ ಇಟ್ಟುಕೊಳ್ಳಿ. ಕೋರ್ಟ್‌ಗೆ ರಾಜಕೀಯ ವಿಚಾರ ಯಾಕೆ ತರುತ್ತೀರಿ? ಎಂದು ತರಾಟೆಗೆ ತೆಗೆದುಕೊಂಡಿದೆ. 

ಅಲ್ಲದೇ ದಂಡ ಸಹಿತ ಯಾಕೆ ಈ ಅರ್ಜಿಯನ್ನ ವಜಾ ಮಾಡಬಾರದು? ಅರ್ಜಿದಾರರು ಸಚಿವರಲ್ಲವೇ 1 ಲಕ್ಷ ರೂ. ದಂಡ ಯಾಕೆ ವಿಧಿಸಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿತು. ಸಿಜೆಐ ಆಕ್ಷೇಪದ ಬೆನ್ನಲ್ಲೇ ಸಚಿವ ಶಿವಾನಂದ ಪಾಟೀಲ್ ಪರ ವಕೀಲರು ಅರ್ಜಿ ವಾಪಸ್ ಪಡೆದಿದ್ದಾರೆ.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ