Breaking News

ಅಧಿಕಾರ ಇದ್ದಾಗ ನವರಂಗಿ ಆಟ, ವಿಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ’: ಆರ್​ ಅಶೋಕ್​ ವಿರುದ್ಧ ಸಿಎಂ ಕಿಡಿ

Spread the love

ಬೆಂಗಳೂರು: ಅಧಿಕಾರ ಇದ್ದಾಗ ನವರಂಗಿ ಆಟ, ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ. ಅಧಿಕಾರ ಇದ್ದಾಗ ಹಗಲುವೇಷ, ವಿರೋಧ ಪಕ್ಷದಲ್ಲಿದ್ದಾಗ ರೋಷಾವೇಶ. ಈ ಬಣ್ಣನೆ ನಿಮ್ಮ ಆತ್ಮವಂಚಕ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಸಾರಿಗೆ ನೌಕರರು ಮೊದಲ ಬಾರಿ ವೇತನ‌ ಪರಿಷ್ಕರಣೆಗಾಗಿ ಮುಷ್ಕರ ನಡೆಸಿದಾಗ ಸಾರಿಗೆ ಸಚಿವರಾಗಿದ್ದವರು ನೀವೇ ಅಲ್ಲವೇ? ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ 15 ದಿವಸಗಳ‌ ಸುದೀರ್ಘ ಮುಷ್ಕರ ನಡೆದಾಗಲೂ ಸಾರಿಗೆ ಸಚಿವರಾಗಿ ಕೈಕಟ್ಟಿ ಕೂತು ತಮ್ಮ ಅಸಾಮರ್ಥ್ಯ ಪ್ರದರ್ಶಿಸಿದ್ದೂ ನೀವೇ ಅಲ್ಲವೇ? ಎಂದು ಆರ್​ ಅಶೋಕ್​ ಅವರಿಗೆ ಸಿಎಂ ಪ್ರಶ್ನಿಸಿದ್ದಾರೆ.

ತಮ್ಮ ಪಕ್ಷದ ಅಧಿಕಾರದ ಅವಧಿಯಲ್ಲಿ ಸಾರಿಗೆ ನೌಕರರ ತಿಂಗಳ ವೇತನ ಹೇಗೆ ಪಾವತಿಯಾಗುತ್ತಿತ್ತು ಎಂದು ಮಾಹಿತಿ ಪಡೆದು ತಿಳಿಸುವಿರಾ? ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿ ಸಾರಿಗೆ ನೌಕರರಿಗೆ ಅರ್ಧ ಸಂಬಳ, ಈ ತಿಂಗಳ ಸಂಬಳ ಮುಂದಿನ ತಿಂಗಳು ನೀಡುತ್ತಿದ್ದಾಗ ಅಧಿಕಾರದಲ್ಲಿದ್ದದ್ದು ನಿಮ್ಮದೇ ಪಕ್ಷ ಅಲ್ಲವೇ?. ನಮ್ಮ ಸರ್ಕಾರದ ಅವಧಿಯಲ್ಲಿ 2012-2016ರ ವರೆಗೆ ವೇತನ ಹೆಚ್ಚಳ ಮಾಡಿ ಅದನ್ನು 2012 ರಿಂದಲೇ ಪೂರ್ವಾನ್ವಯ ಆಗುವಂತೆ ಜಾರಿಗೊಳಿಸಿದ್ದೆವು. 2016-2020ರ ವರೆಗೆ ವೇತನ ಹೆಚ್ಚಳ ಮಾಡಿದಾಗ 2016 ರಿಂದ ಜಾರಿ ಮಾಡಿದ್ದೆವು ಎಂದು ಸಿಎಂ ತಿಳಿಸಿದ್ದಾರೆ.

ಆದರೆ ತಮ್ಮ‌ ಪಕ್ಷದ ಆಡಳಿತದ ಅವಧಿಯಲ್ಲಿ ಸಾರಿಗೆ ನೌಕರರು 2020ರಿಂದಲೇ ವೇತನ ಹೆಚ್ಚಳ ಮಾಡಬೇಕೆಂದು ಬೇಡಿಕೆ ಸಲ್ಲಿಸಿದ್ದರೂ 01-03-2023ರಿಂದ ಜಾರಿಗೊಳಿಸಿ (ಸರ್ಕಾರದ ಆದೇಶ ಸಂಖ್ಯೆ: ಟಿಡಿ 12 ಟಿಸಿಬಿ 2023) ಬೆಂಗಳೂರು ನೌಕರರಿಗೆ ಅನ್ಯಾಯ ಮಾಡಿದ್ದು ನೀವೇ ಅಲ್ಲವೇ?. ತಮ್ಮ‌ ಪಕ್ಷದ ಅವಧಿಯಲ್ಲಿ ನೇಮಕಾತಿ ಮತ್ತು ಹೊಸ ಬಸ್ ಸೇರ್ಪಡೆ ಸ್ಥಗಿತಗೊಂಡಿತ್ತು, ನೌಕರರ ಭವಿಷ್ಯ ನಿಧಿ ಮತ್ತು ಡೀಸೆಲ್ ಹಣ ಪಾವತಿ, ಇತರೆ ಹೊಣೆಗಾರಿಕೆ ಹೀಗೆ 5,900 ಕೋಟಿ ರೂಪಾಯಿ ಬಾಕಿ ಇತ್ತು ಎಂಬುದರ‌ ಬಗ್ಗೆ ನಿಮಗೆ ಮಾಹಿತಿಯಿದೆಯೇ ಎಂದು ಪ್ರಶ್ನಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ