Breaking News

ಧಾರವಾಡ: ಬಾಲಗರ್ಭಿಣಿ ಪ್ರಕರಣಗಳು ಹೆಚ್ಚಳ

Spread the love

ಧಾರವಾಡ: ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಬಾಲಕಿಯರು ಆಕರ್ಷಣೆಗೊಳಗಾಗಿ ಪ್ರೇಮ ಪ್ರಕರಣಗಳಲ್ಲಿ ಸಿಲುಕಿ ಗರ್ಭ ಧರಿಸುತ್ತಿರುವ ಪ್ರಕರಣಗಳು ಕೇಳಿ ಬರುತ್ತಿವೆ. ಇಂಥ ಅನೇಕ ಪ್ರಕರಣಗಳು ವರದಿಯಾಗುತ್ತಿವೆ.

ಧಾರವಾಡದಲ್ಲಿ ಬಾಲಗರ್ಭಿಣಿಯರ ಪ್ರಕರಣಗಳು ಹೆಚ್ಚುತ್ತಿದ್ದು, ಇದರಲ್ಲಿ ಪ್ರೇಮ ಪ್ರಕರಣಗಳೇ ಅಧಿಕ. ಆರ್‌ಸಿಎಚ್ ದತ್ತಾಂಶದ ಪ್ರಕಾರ 2023-24ರಲ್ಲಿ 111 ಹಾಗೂ 2024-25ರಲ್ಲಿ 31 ಪ್ರಕರಣಗಳು ದಾಖಲಾಗಿವೆ. ಈ ಅಂಕಿ-ಅಂಶಗಳಿಂದ ಪಾಲಕರಲ್ಲಿ ಆತಂಕ ಹೆಚ್ಚಾಗಿದೆ.

ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾ ಜಾವೂರು, “ಸಾಕಷ್ಟು ಪ್ರಕರಣಗಳಲ್ಲಿ ಬಾಲಕಿಯರು ತಾವು ಪ್ರೀತಿ ಮಾಡುತ್ತಿರುವ ಯುವಕ ಅಥವಾ ಬಾಲಕನೊಂದಿಗೆ ಲೈಂಗಿಕ ಸಂಪರ್ಕ ಹೊಂದುತ್ತಿರುವುದು ಹೆಚ್ಚಾಗುತ್ತಿವೆ. ಅಷ್ಟೇ ಅಲ್ಲದೆ, ಲೈಂಗಿಕ ಕ್ರಿಯೆಗೆ ಸುರಕ್ಷಿತ ವಿಧಾನ ಬಳಸೋದಿಲ್ಲ. ಇದರಿಂದಾಗಿ ಸಾಕಷ್ಟು ಬಾಲಕಿಯರು ಗರ್ಭಿಣಿಯಾಗುತ್ತಿದ್ದಾರೆ. ಇನ್ನು ಧಾರವಾಡ ಜಿಲ್ಲೆಯಲ್ಲಿ ಇಂಥ ಅನೇಕ ಪ್ರಕರಣಗಳು ವರದಿಯಾಗುತ್ತಿವೆ” ಎಂದು ತಿಳಿಸಿದರು.

“ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಾಹಿತಿಯಂತೆ 2024-25ನೇ ಸಾಲಿನಲ್ಲಿ ಧಾರವಾಡ ಜಿಲ್ಲೆಯಲ್ಲಿ 31 ಬಾಲಗರ್ಭಿಣಿ ಪ್ರಕರಣಗಳು ದಾಖಲಾಗಿವೆ. ಇನ್ನು ಈ ವರ್ಷದ ಆರಂಭದ ಮೂರು ತಿಂಗಳಲ್ಲಿ ಒಟ್ಟು 3 ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ ಒಂದು ಬಾಲಕಿಗೆ ಅಬಾರ್ಷನ್ ಮಾಡಿಸಲಾಗಿದ್ದು, ಇನ್ನೆರಡು ಬಾಲಕಿಯರು ಮಗುವಿಗೆ ಜನ್ಮ ನೀಡಿದ್ದಾರೆ” ಎಂದು ಮಾಹಿತಿ ನೀಡಿದರು.

ವರ್ಷ ಬಾಲ ಗರ್ಭಿಣಿಯರ ಸಂಖ್ಯೆ
2023-24 111
2024-25 31
2025-26 3 (ಏಪ್ರಿಲ್, ಮೇ, ಜೂನ್​ವರೆಗೆ)

“ಈ ಅಂಕಿಅಂಶಗಳನ್ನು ನೋಡಿದರೆ ಬಾಲಗರ್ಭಿಣಿಯರ ಸಂಖ್ಯೆಯಲ್ಲಿ ಇಳಿಕೆಯಾಗಿದೆ ಎನ್ನುವುದು ಕಂಡುಬಂದರೂ ವಾಸ್ತವ ಸ್ಥಿತಿ ಹಾಗಿರೋದಿಲ್ಲ. ಏಕೆಂದರೆ ಬಾಲಕಿಯರು ಮಕ್ಕಳನ್ನು ಹೆತ್ತು ಒಂದೆರಡು ವರ್ಷಗಳ ಬಳಿಕ ಸಾಕಷ್ಟು ಪ್ರಕರಣಗಳು ಬಯಲಿಗೆ ಬರುತ್ತವೆ. ಹೀಗಾಗಿ ಕಳೆದ ಎರಡು ವರ್ಷಗಳಲ್ಲಿನ ಬಾಲಗರ್ಭಿಣಿಯರ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಕೂಡ ಇದ್ದು, ಈ ಪ್ರಕರಣಗಳಲ್ಲಿ 2023-24ರಲ್ಲಿ 12 ಹಾಗೂ 2024-25ರಲ್ಲಿ 13 ಎಫ್‌ಐಆರ್ ದಾಖಲಾಗಿವೆ” ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ