Breaking News

ನವೆಂಬರ್ 1ರ ಒಳಗಾಗಿ ಐದು ಪಾಲಿಕೆಗಳ ಚುನಾವಣೆ ಪೂರ್ವಭಾವಿ ಸಿದ್ಧತೆ: ಡಿಸಿಎಂ

Spread the love

ಬೆಂಗಳೂರು: ನವೆಂಬರ್ 1ರ ಒಳಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಐದು ಪಾಲಿಕೆಗಳ ಚುನಾವಣೆ ಪೂರ್ವಸಿದ್ಧತೆ ಮಾಡಲಾಗುವುದು. ನೋಂದಣಿ ನಿಯಮಗಳನ್ನು ಯಾವ ರೀತಿ ರೂಪಿಸಬೇಕು ಎಂಬ ಬಗ್ಗೆ ಚುನಾವಣಾ ಆಯೋಗದ ಅಭಿಪ್ರಾಯ ಕೇಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಮುಖಂಡರ ಸಭೆಯ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಚುನಾವಣೆಯ ಮತದಾನದ ಹಕ್ಕನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂದು ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದ್ದೇವೆ. ಬ್ಲಾಕ್ ಅಧ್ಯಕ್ಷರು ಹಾಗೂ ಶಾಸಕರನ್ನು ಕರೆದು ಮತ್ತೊಂದು ಸುತ್ತಿನ ಸಭೆ ನಡೆಸಲಾಗುವುದು ಎಂದರು.

ಮುಖ್ಯಮಂತ್ರಿಯವರು ಇಂಡಿಯಾ ಒಕ್ಕೂಟ ಸಭೆಗೆ ತೆರಳುತ್ತಿರುವ ಬಗ್ಗೆ ಕೇಳಿದಾಗ, ಇಂಡಿಯಾ ಒಕ್ಕೂಟದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ ಬಂದಿದೆ. ನಾನು ಇಲ್ಲಿ ಪ್ರತಿಭಟನೆ ಸಭೆ ಸಿದ್ಧತೆಯ ಉಸ್ತುವಾರಿ ನೋಡಬೇಕು. ಅದಕ್ಕಾಗಿ ಇಲ್ಲೇ ಇರುತ್ತೇನೆ ಎಂದು ಹೇಳಿದರು.ಪ್ರತಿಯೊಂದು ಸಂದರ್ಭದಲ್ಲಿ ಬೆಂಗಳೂರು ಮತ್ತು ಕರ್ನಾಟಕ ಈ ದೇಶಕ್ಕೆ ಪ್ರಬಲ ಸಂದೇಶವನ್ನು ನೀಡಿವೆ. ಇಂಡಿಯಾ ಒಕ್ಕೂಟ ಸಹ ಜನ್ಮ ತಳೆದಿದ್ದು ಬೆಂಗಳೂರಿನಲ್ಲಿ. ಕೋರ್ಟ್ ಆದೇಶ ಪಾಲನೆ ಮಾಡಬೇಕು ಎಂದು ಐತಿಹಾಸಿಕ ಸ್ಥಳವಾದ ಸ್ವಾತಂತ್ರ ಉದ್ಯಾನದಲ್ಲಿ ಮತಗಳ್ಳತನದ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ