Breaking News

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 5 ದಿನಗಳವರೆಗೆ ಭಾರಿ ಮಳೆ

Spread the love

ಬೆಂಗಳೂರು: ರಾಜ್ಯದಲ್ಲಿ ಮಳೆ ಮುಂದುವರೆದಿದ್ದು, ಇಂದಿನಿಂದ ಮತ್ತೆ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯಪುರ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದೆ. ಹಾಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ಬೀದರ್​​, ಬೆಳಗಾವಿ, ಧಾರವಾಡ, ಹಾವೇರಿ, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆಯಿದೆ. ಅದೇ ರೀತಿ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್​​ ದಾಖಲಾಗಲಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ