ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಚಿವ ಎಂಬಿಪಿ; ಮತ್ತೆ ಆಗಮಿಸಿದ ಮಳೆಯಿಂದ ಮತ್ತೆ ಶುರುವಾಯಿತು ಆತಂಕ
ವಿಜಯಪುರ ನಗರದಲ್ಲಿ ಮಳೆ ಮತ್ತೆ ಆರ್ಭಟಿಸುತ್ತಿದೆ.
ನಗರದಲ್ಲಿ ಮತ್ತೆ ಮಳೆ ಶುರುವಾಗಿದೆ. ನಿನ್ನೆ ರಾತ್ರಿ ಸುರಿದ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿತ್ತು. ಇಂದು ಬೆಳಿಗ್ಗೆ ಸಚಿವ ಎಂ.ಬಿ.ಪಾಟೀಲ ನೇತೃತ್ವದಲ್ಲಿ ಮಳೆಯಿಂದ ಆದ ಹಾನಿ ಪರಿಹಾರ ಕುರಿತು ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ಸಚಿವ ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಚಳಿ ಬಿಡಿಸಿದ್ದರು.
ಸಭೆಯಲ್ಲಿ ನಿಗದಿತ ಅವಧಿಯಲ್ಲಿ ಕಾಮಗಾರಿ ಮುಗಿಸಲು ಕಡಕ್ ಎಚ್ಚರಿಕೆ ನೀಡಿದ್ದರು. ನಗರದಲ್ಲಿ ಮುಂಜಾನೆಯಿಂದ ಮೋಡ ಕವಿದ ವಾತಾವರಣ ಇತ್ತು.
ಇದೀಗ ದಟ್ಟವಾದ ಮೋಡ ಕವಿದಿದ್ದು ಮಳೆ ಮುಂದುವರೆಯುವ ಸಾಧ್ಯತೆ ಇದೆ. ಇದರಿಂದಾಗಿ ಇಳಿಜಾರು ಪ್ರದೇಶಗಳಲ್ಲಿ ಆತಂಕ ಮತ್ತೆ ಮನೆ ಮಾಡಿದೆ.