Breaking News

ಧರ್ಮಸ್ಥಳದ ಬಗ್ಗೆ ಅಪಪ್ರಚಾರ, ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿದೆ: ಸಂಸದ ಜಗದೀಶ ಶೆಟ್ಟರ್ ಗಂಭೀರ ಆರೋಪ

Spread the love

ಬೆಳಗಾವಿ: ಹಿಂದೂ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಮತ್ತು ಅಲ್ಲಿನ ನಂಬಿಕೆಗಳ ಬಗ್ಗೆ ಅಪಪ್ರಚಾರ ಮಾಡುವುದನ್ನು ನಾವು ಖಂಡಿಸುತ್ತೇವೆ. ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದಲೇ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಗಂಭೀರ ಆರೋಪ ಮಾಡಿದರು.

ಧರ್ಮಸ್ಥಳದಲ್ಲಿ ಎಸ್ಐಟಿ ತನಿಖೆ ವಿಚಾರಕ್ಕೆ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಾಥಮಿಕ ಸಾಕ್ಷ್ಯಗಳು ಇಲ್ಲದೇ ಎಸ್ಐಟಿ ರಚನೆ ಮಾಡಿದರು. ಸರಿ ತಪ್ಪು ಎಂಬುದು ತನಿಖೆ ಆಗಲಿ. 13 ಸ್ಥಳಗಳಲ್ಲಿ ಪರೀಕ್ಷೆ ಮಾಡುತ್ತಿದ್ದಾರೆ. ಆದರೆ, ಈವರೆಗೆ ಯಾವುದೇ ಮೃತದೇಹಗಳು ಪತ್ತೆ ಆಗಿಲ್ಲ. ಪುರಾವೆಗಳೂ ಸಿಕ್ಕಿಲ್ಲ. ನ್ಯಾಯಯುತವಾಗಿ ತನಿಖೆ ಮಾಡಲಿ. ಆದರೆ, ಹಿಂದೂ ಧರ್ಮ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುವುದನ್ನು ನಿಲ್ಲಿಸಬೇಕು. ಎಡಪಂಥಿಯರು, ಕಮ್ಯುನಿಷ್ಠರು ಧರ್ಮಸ್ಥಳದ ಬಗ್ಗೆ ನಿರಂತರವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಇದು ಸರಿಯಲ್ಲ. ಇದರಲ್ಲಿ ಸರ್ಕಾರದ ಕುಮ್ಮಕ್ಕು ಇದೆ ಎಂದು ದೂರಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ