ಮಂಡ್ಯ, (ಆಗಸ್ಟ್ 09): ಟಾರ್ಗೆಟ್ ಮಾಡಿದ್ದವನನ್ನ ಬಿಟ್ಟು ಮತ್ತೊಬ್ಬನನ್ನ ಹತ್ಯೆಗೈದಿರುವ (Murder) ಘಟನೆ ಮಂಡ್ಯದಲ್ಲಿ (Mandya) ನಡೆದಿದೆ. ಮದ್ದೂರು ತಾಲೂಕಿನ ಹೆಮ್ಮನಹಳ್ಳಿ ರಸ್ತೆಯ ನಿರ್ಜನ ಪ್ರದೇಶದಲ್ಲಿ ಯುವಕನನ್ನ ಬರ್ಬರವಾಗಿ ಕೊಲೆ ಮಾಡಲಾಗಿದೆ. ವೈಟ್ ಶರ್ಟ್ ಸುಳಿವು ಹಿಡಿದು ಫಾಲೋ ಮಾಡಿದ್ದ ಹಂತಕರು ಟಾರ್ಗೆಟ್ ಮಾಡಿದ್ದವನ ಬದಲಿಗೆ ಮತ್ತೊಬ್ಬನನ್ನ ಕೊಚ್ಚಿ ಕೊಲೆ ಮಾಡಿದ್ದಾರೆ. ವಡ್ಡರಹಳ್ಳಿ ಗ್ರಾಮದ ಅರುಣ್ (34) ಕೊಲೆಯಾದ ಯುವಕ. ಬೆಂಗಳೂರಿನಲ್ಲಿ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಅರುಣ್ ನಿನ್ನೆ (ಆಗಸ್ಟ್ 08) ವರಮಹಾಲಕ್ಷ್ಮೀ ಹಬ್ಬ ಹಿನ್ನೆಲೆ ಊರಿಗೆ ಬಂದಿದ್ದ. ಈ ವೇಳೆ ಟಾರ್ಗೆಟ್ ಮಾಡಿದ್ದವನನ್ನ ಬಿಟ್ಟು ಅರುಣ್ ನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ.
ಘಟನೆ ನಡೆದಿದ್ದು ಹೀಗೆ?
ನಿನ್ನೆ (ಆಗಸ್ಟ್ 08) ರಾತ್ರಿ ಹತ್ಯೆಯಾದ ಅರುಣ್ ತನ್ನ ಸ್ನೇಹಿತ ಸೂರ್ಯ, ಸಹೋದರ ಉಮೇಶ್ ಮತ್ತು ಸಂಬಂಧಿ ದೇವರಾಜ್ ಜೊತೆ ಪಾರ್ಟಿ ಮಾಡುತ್ತಿದ್ದ. ಇದೇ ವೇಳೆ ಬಾರ್ ಮುಂಭಾಗದಲ್ಲಿ ಸಿಕ್ಕ ವಿಕ್ರಮ್ ಎಂಬಾತನ ಜೊತೆ ಸೂರ್ಯ ಹಳೇ ದ್ವೇಷದ ವಿಚಾರಕ್ಕೆ ಜಗಳ ತೆಗೆದಿದ್ದಾನೆ. ಎರಡು ವರ್ಷದ ಹಿಂದಿನ ಜಗಳದ ವಿಚಾರವನ್ನು ಮುಂದಿಟ್ಟುಕೊಂಡು ಸೂರ್ಯ, ವಿಕ್ರಮ್ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ, ಅರುಣ್ ಮಧ್ಯ ಪ್ರವೇಶಿಸಿ ಜಗಳ ಬಿಡಿಸಿ ಪಾರ್ಟಿ ಮುಂದುವರೆಸಿದ್ದಾನೆ.
Laxmi News 24×7