Breaking News

ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವಕ್ಕೆ ಸಿದ್ದಾಪುರದ ದಂಪತಿ

Spread the love

ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವಕ್ಕೆ ಸಿದ್ದಾಪುರದ ದಂಪತಿ
ಕೌಶಲ್ಯಾಭಿವೃದ್ದಿ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ವಿಶೇಷ ಯೋಜನೆ
ಬೆಂಗಳೂರು : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉತ್ತರ ಕನ್ನಡ ಜಿಲ್ಲೆಯಾ ಸಿದ್ದಾಪುರ ತಾಲೂಕಿನ ದಂಪತಿಗೆ ಅವಕಾಶ ಸಿಕ್ಕಿದೆ.May be an image of text that says "D 口 ባሰን पततामेच चपो On the occasion the Independence Day The President of Bharat noquests the plovserre of the company of Ons Cshwvan .ញ R.S.V.P To to o Home Reception al Rashtrafati BKa4KиR Cultural Centre, Now Dwthi Friday, Stugenat15 2025al1800hrs 012360 23018345. 23015321 Exteraic4229 4229 64T9 Dhess:Fema/Smm.Ceen स्वतत्रता दिवस ၃၀၃၃"
ಸಿದ್ದಾಪುರ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನಮನೆ ಸಂಜೀವಿನಿ ಒಕ್ಕೂಟದ ಹಸವಂತೆ ಗ್ರಾಮದ ಪ್ರಗತಿ ಸ್ತ್ರೀ ಶಕ್ತಿ ಸಂಘದ ಸರಸ್ವತಿ ಈಶ್ವರ ನಾಯ್ಕ ದಂಪತಿಗಳು ಆಯ್ಕೆಯಾಗಿದ್ದಾರೆ. ಈ ಸಂಬಂಧ ದಂಪತಿಗೆ ಅಧಿಕಾರಿಗಳು ಆಮಂತ್ರಣ ಪತ್ರಿಕೆಯನ್ನ ನೀಡಿದ್ದಾರೆ.May be an image of 1 person and smiling
ಸಂಜೀವಿನಿ ಯೋಜನೆಯಡಿಯಲ್ಲಿ ನಡೆಯುವ ಸರಸ್‌ ಮೇಳಗಳಲ್ಲಿ ಭಾಗವಹಿಸಿದ್ದ ಈ ದಂಪತಿ ತಮ್ಮ ಚಿತ್ತಾರ ಕಲೆಯನ್ನು ಪರಿಚಯ ಮಾಡಿಸಿರುವುದಕ್ಕೆ ಈ ಅವಕಾಶ ದೊರಕಿದೆ ಎಂದು ರಾಷ್ಟ್ರೀಯ ಜೀವನೋಪಾಯ ಇಲಾಖೆಯ ಅಭಿಯಾನ ನಿರ್ದೇಶಕರಾದ ಪಿ.ಐ. ಶ್ರೀವಿದ್ಯಾ ತಿಳಿಸಿದ್ದಾರೆ.
ಸರಸ್ವತಿ ಅವರ ಪತಿ ಹಸೆ ಚಿತ್ತಾರ ಕಲಾವಿರ ಈಶ್ವರ ನಾಯ್ಕ ಹಸುವಂತೆ ಅವರಿಗೆ ಪ್ರಸಕ್ತ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವ ಅವಕಾಶ ಲಭಿಸಿತ್ತು.May be an image of 2 people, henna and people studying
ನವದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಸ್ವಸಹಾಯ ಸಂಘದ ಸದಸ್ಯರಾದ ಉತ್ತರ ಕನ್ನಡ ಜಿಲ್ಲೆಯ ಚಿತ್ತಾರ ಕಲೆಯ ಕುಶಲಕರ್ಮಿಗಳನ್ನು ಪ್ರತಿನಿಧಿಸುವ ಸರಸ್ವತಿ ಅವರನ್ನು ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಹೆಮ್ಮೆಯ ವಿಷಯವಾಗಿದೆ ಎಂದು ಶ್ರೀವಿದ್ಯಾ ತಿಳಿಸಿದ್ದಾರೆ.
ಈ ಪ್ರತಿಷ್ಠಿತ ಕಾರ್ಯಕ್ರಮದ ಭಾಗವಾಗಿ, ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡುವ ಅವಕಾಶ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ