Breaking News

ಮೈಸೂರು ದಸರಾ ಗಜಪಡೆಯ ತೂಕ ಪರೀಕ್ಷೆ: 25 ವರ್ಷದ ಭೀಮನೇ ಬಲಾಢ್ಯ

Spread the love

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾದ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಅಭಿಮನ್ಯು ನೇತೃತ್ವದ ಮೊದಲ ತಂಡದ 9 ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಯಿತು. ಈ ತೂಕ ಪರೀಕ್ಷೆಯಲ್ಲಿ 25 ವರ್ಷದ ಭೀಮನೇ ಅತೀ ಹೆಚ್ಚು ತೂಕ ಹೊಂದಿರುವ ಆನೆಯಾಗಿದ್ದು, ಆನಂತರ ಜಂಬೂ ಸವಾರಿ ಕ್ಯಾಪ್ಟನ್ ಅಭಿಮನ್ಯು 2ನೇ ಸ್ಥಾನದಲ್ಲಿದೆ.

ನಾಡಹಬ್ಬ ದಸರಾದಲ್ಲಿ ಭಾಗವಹಿಸಲು ಆಗಮಿಸಿರುವ ಮೊದಲ ಹಂತದ ಅಭಿಮನ್ಯು ನೇತೃತ್ವದ ಗಜಪಡೆಗೆ ಇಂದು ನಗರದ ಧನ್ವಂತರಿ ರಸ್ತೆಯಲ್ಲಿರುವ ತೂಕ ಕೇಂದ್ರದಲ್ಲಿ ತೂಕ ಪರೀಕ್ಷೆ ಮಾಡಲಾಯಿತು. ಅದರಲ್ಲಿ 25 ವರ್ಷದ ಭೀಮ ಅತೀ ಹೆಚ್ಚು ತೂಕ ಇರುವ ಆನೆಯಾಗಿದೆ.9 ಆನೆಗಳ ತೂಕದ ವಿವರ: ಅಭಿಮನ್ಯು – 5,360 ಕೆ.ಜಿ., ಧನಂಜಯ – 5,310 ಕೆ.ಜಿ., ಕಾವೇರಿ – 3,010 ಕೆ.ಜಿ., ಲಕ್ಷ್ಮಿ – 3,730 ಕೆ.ಜಿ., ಭೀಮ – 5,465 ಕೆ.ಜಿ., ಏಕಲವ್ಯ – 5,305 ಕೆ.ಜಿ., ಮಹೇಂದ್ರ – 5,120 ಕೆ.ಜಿ., ಕಂಜನ್ – 4,880 ಕೆ.ಜಿ., ಪ್ರಶಾಂತ – 5,110 ಕೆ.ಜಿ. ತೂಕ.

ಡಿಸಿಎಫ್ ಪ್ರಭುಗೌಡ ಹೇಳಿದ್ದೇನು?: “ಈ ಬಾರಿ ದಸರಾದಲ್ಲಿ ಭಾಗವಹಿಸಲು ಆಗಮಿಸಿರುವ ಅಭಿಮನ್ಯು ನೇತೃತ್ವದ 9 ಆನೆಗಳ ತೂಕ ಪರೀಕ್ಷೆ ಮಾಡಲಾಗಿದ್ದು, ಎಲ್ಲ ಆನೆಗಳು ಆರೋಗ್ಯವಾಗಿವೆ. ಕಳೆದ ಬಾರಿ ದಸರಾದಲ್ಲಿ ಭಾಗವಹಿಸಿ ವಾಪಸ್ ಕಾಡಿಗೆ ಹೋಗುವಾಗ ಇದ್ದ ತೂಕವನ್ನೇ ಉಳಿಸಿಕೊಂಡಿರುವ ಆನೆಗಳು ಎಲ್ಲವೂ ಆರೋಗ್ಯವಾಗಿವೆ” ಎಂದು ಡಿಸಿಎಫ್ ಪ್ರಭುಗೌಡ ಮಾಹಿತಿ ನೀಡಿದರು.

Elephants enters Mysuru

“ಆನೆಗಳ ಆರೋಗ್ಯ ಹಾಗೂ ಜಂಬೂಸವಾರಿ ಮೆರವಣಿಗೆಗೆ ಯಾವ ರೀತಿ ಪ್ರೋಟೀನ್​ಗಳು, ವಿಶೇಷ ಆಹಾರ ನೀಡಬೇಕು ಎಂಬುದನ್ನು ತಿಳಿಯಲು ಇಂದು ತೂಕ ಪರೀಕ್ಷೆ ಮಾಡಲಾಯಿತು. ಇಂದು ಅರಣ್ಯಭವನದಲ್ಲಿ ವೈದ್ಯರ ಮೀಟಿಂಗ್ ಮಾಡಿ ಅಂತಿಮವಾಗಿ ಯಾವ ರೀತಿ ಆಹಾರ ನೀಡಬೇಕು ಎಂಬುದನ್ನು ತೀರ್ಮಾನ ಮಾಡಲಾಗುತ್ತದೆ. ಅದರಂತೆ ನಾಳೆಯಿಂದ ವಿಶೇಷ ಆಹಾರ ಜೊತೆಗೆ ತಾಲೀಮು ನಡೆಸಲಾಗುವುದು” ಎಂದು ಹೇಳಿದರು.

MYSURU DASARA ELEPHANTS WEIGHT CHECK

ಗಜಪಡೆ ಅರಮನೆಯಲ್ಲಿ ವಾಸ್ತವ್ಯ: ನಿನ್ನೆ ಭಾನುವಾರ ಗಜಪಡೆ ಅರಣ್ಯ ಭವನದಿಂದ ಕಾಲ್ನಡಿಗೆಯಲ್ಲಿ ಆಗಮಿಸಿ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ ಮೂಲಕ ಅರಮನೆ ಆವರಣವನ್ನು ಪ್ರವೇಶಿಸಿತು. 9 ಆನೆಗಳು ಅರಮನೆಯ ಮುಂಭಾಗದ ಕೋಡಿ ಸೋಮೇಶ್ವರ ದೇವಾಲಯದ ಆವರಣದಲ್ಲಿ ವಾಸ್ತವ್ಯ ಹೂಡಿವೆ.

Elephants enters Mysuru

ಎರಡು ತಿಂಗಳುಗಳ ಕಾಲ ಇಲ್ಲೇ ಇರುವ ಗಜಪಡೆ ಜಂಬೂಸವಾರಿ ಮೆರವಣಿಗೆ ಮುಗಿಸಿಕೊಂಡು ಕಾಡಿಗೆ ಮರಳುತ್ತವೆ. ಈ ಮಧ್ಯೆ ಗಜಪಡೆಯನ್ನು ನಿತ್ಯ ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂಸವಾರಿ ತಾಲೀಮು ನಡೆಸಲಾಗುತ್ತದೆ. ಜೊತೆ ಗಜಪಡೆಗೆ ವಿಶೇಷ ಆಹಾರ ನೀಡಲಾಗುತ್ತದೆ. ಈ ಬಾರಿಯೂ ಸಹ ಚಿನ್ನದ ಅಂಬಾರಿಯನ್ನು ಅಭಿಮನ್ಯು ಹೊರಲಿದ್ದಾನೆ ಎಂದು ಈಗಾಗಲೇ ಘೋಷಣೆ ಮಾಡಲಾಗಿದೆ.

MYSURU DASARA ELEPHANTS WEIGHT CHECK

ಆನೆಗಳ ತೂಕ ಪರೀಕ್ಷೆ 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ