Breaking News

ಬಂಡೀಪುರದಲ್ಲಿ ಆನೆ ಜೊತೆ ಫೋಟೋ ತೆಗೆದುಕೊಳ್ಳಲು ಹೋದ ವ್ಯಕ್ತಿಗೆ 25 ಸಾವಿರ ರೂಪಾಯಿ ದಂಡ

Spread the love

ಚಾಮರಾಜನಗರ: ಆಹಾರ ಅರಸಿ ರಸ್ತೆಗಿಳಿದಿದ್ದ ಕಾಡಾನೆ ಜೊತೆ ಫೋಟೋ ಕ್ಲಿಕ್ಕಿಸಲು ಹೋಗಿ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಿ ಅರಣ್ಯ ಇಲಾಖೆ ದಂಡ ವಿಧಿಸಿ, ವನ್ಯಜೀವಿಗಳಿಗೆ ತೊಂದರೆ ಕೊಡದಂತೆ ಮುಚ್ಚಳಿಕೆ ಬರೆಸಿಕೊಂಡಿದೆ. ನಂಜನಗೂಡಿನ ಬಸವರಾಜು ಎಂಬವರಿಗೆ 25 ಸಾವಿರ ರೂಪಾಯಿ ದಂಡ ಹಾಕಲಾಗಿದೆ.

ಆಹಾರ ಅರಸಿ ರಸ್ತೆಗಿಳಿದಿದ್ದ ಕಾಡಾನೆ ಲಾರಿಯಿಂದ ಕ್ಯಾರೆಟ್ ಚೀಲ ಕಿತ್ತು ತಿನ್ನುತ್ತಿದ್ದಾಗ ಬಸವರಾಜು ಕಾರಿನಿಂದ ಇಳಿದು ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ, ರೊಚ್ಚಿಗೆದ್ದ ಕಾಡಾನೆ ಬಸವರಾಜು ಅವರನ್ನು ಅಟ್ಟಾಡಿಸಿ ತುಳಿಯಲು ಯತ್ನಿಸಿತ್ತು. ಅದೃಷ್ಟವಶಾತ್, ಕೊಂಚದರಲ್ಲೇ ಪಾರಾಗಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ಲಾಗಿತ್ತು.

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಬಂಡೀಪುರ ಅರಣ್ಯ ಇಲಾಖೆ ಬಸವರಾಜು ಅವರ ವಿಳಾಸವನ್ನು ಪತ್ತೆ ಹಚ್ಚಿ ಕರೆತಂದು ಮುಚ್ಚಳಿಕೆ ಬರೆಸಿಕೊಂಡು, ದಂಡ ವಿಧಿಸಿ ಬಿಸಿ ಮುಟ್ಟಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ