Breaking News

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸೌರಶಕ್ತಿ ಬಲ

Spread the love

ಹುಬ್ಬಳ್ಳಿ: ವಾಣಿಜ್ಯ ‌ನಗರಿ ಹುಬ್ಬಳ್ಳಿ ವಿಮಾನ ‌ನಿಲ್ದಾಣ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ‌. ಇದರ ಭಾಗವಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣ ಸೌರಶಕ್ತಿ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಿದೆ. ನಿಲ್ದಾಣದಲ್ಲಿ ಅಳವಡಿಸಲಾಗಿರುವ ಸೋಲಾರ್ ಪ್ಲಾಂಟ್ ಮೂಲಕ ನಿತ್ಯ 8 ಮೆಗಾವಾಟ್ ವಿದ್ಯುತ್ ಉತ್ಪಾದಿಸುವ ದೇಶದ ಮೊದಲ ವಿಮಾನ ನಿಲ್ದಾಣದ ಎಂಬ ಖ್ಯಾತಿಗೆ ಪಾತ್ರವಾಗಿದೆ.ಇಲ್ಲಿ ಸೌರಶಕ್ತಿ ಘಟಕ 2022ರಲ್ಲಿಯೇ ಸ್ಥಾಪಿಸಲ್ಪಟ್ಟಿದೆ. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಯಾವುದೇ ನಿಲ್ದಾಣದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದ ವಿದ್ಯುತ್ ಉತ್ಪಾದಿಸುವ ಸೋಲಾರ್ ಪ್ಲಾಂಟ್ ಇಲ್ಲ ಎನ್ನುವುದು ಗಮನಿಸಬೇಕಾದ ಸಂಗತಿ.ಇಲ್ಲಿನ ಸೋಲಾರ್ ಪ್ಲಾಂಟ್‌ನ ಮತ್ತೊಂದು ವಿಶೇಷವೆಂದರೆ, ಇಲ್ಲಿ ಉತ್ಪಾದನೆಯಾಗುವ ವಿದ್ಯುತ್ ಅನ್ನು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಳಸಿಕೊಳ್ಳುವ ಜತೆಗೆ ರಾಜ್ಯದ ಬೆಳಗಾವಿ, ಮೈಸೂರು ವಿಮಾನ ನಿಲ್ದಾಣ, ಬಳ್ಳಾರಿ ರೆಡಾರ್ ಸ್ಟೇಶನ್, ಬೆಂಗಳೂರಿನ ಗಗನ ಸೆಕ್ಷನ್, ಹೆಚ್​ಎಎಲ್ ಕೋರಮಂಗಲ ಸೆಕ್ಷನ್‌ಗಳಿಗೂ ಪೂರೈಸಲಾಗುತ್ತಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ