Breaking News

ಬೀದಿ ನಾಯಿಗಳ ಹಾವಳಿ: ಪರಿಷತ್​​ನಲ್ಲಿ ಜೋರು ಚರ್ಚೆ

Spread the love

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿರುವ ಬಗ್ಗೆ ವಿಧಾನಪರಿಷತ್ ನಲ್ಲಿ ಜೋರು ಚರ್ಚೆ ನಡೆಯಿತು.

ಪ್ರಶ್ತೋತರ ಕಲಾಪ ವೇಳೆ ವಿಪಕ್ಷ ಸದಸ್ಯ ಎಸ್. ಎಲ್. ಭೋಜೇಗೌಡ ಅವರು ಚಿಕ್ಕಮಗಳೂರಿನಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ. ಮಕ್ಕಳು, ಹಿರಿಯ ನಾಗರಿಕರ ಮೇಲೆ ನಾಯಿ ಕಚ್ಚುವ ಪ್ರಕರಣಗಳು ಅಧಿಕವಾಗುತ್ತಿವೆ. ಚಿಕ್ಕಮಗಳೂರಿಗೆ ಸೀಮಿತವಾಗಿರದೇ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಈ ಸಮಸ್ಯೆ ಉಲ್ಬಣಗೊಂಡಿದೆ. ಸಚಿವರು, ಶಾಸಕರು, ಜಡ್ಜ್ ಮಕ್ಕಳಿಗೆ ಬೀದಿನಾಯಿಗಳಿಂದ ಸಮಸ್ಯೆಯಿಲ್ಲ. ಬೀದಿಯಲ್ಲಿ ಓಡಾಡುವ ಮಕ್ಕಳಿಗೆ ಮಾತ್ರ ತೊಂದರೆಯಾಗುತ್ತಿವೆ. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.

ಬೀದಿ ನಾಯಿಗಳ ದಾಳಿಯಿಂದ ರೇಬಿಸ್ ಖಾಯಿಲೆ ಬರುತ್ತಿದ್ದು, ಇದನ್ನ ತಪ್ಪಿಸಲು ವ್ಯಾಕ್ಸಿನ್ ಇದೆ. ನಾಯಿ ಕಚ್ಚೋದನ್ನು ತಪ್ಪಿಸುವುದು ಹೇಗೆ ? ಎಂಬುದರ ವಸ್ತು ಸ್ಥಿತಿ ಬಗ್ಗೆ ಸುಪ್ರೀಂ ಕೋರ್ಟ್​ಗೆ ಕೇಳುವುದರಲ್ಲಿ ತಪ್ಪೇನಿಲ್ಲ. ಈ ಪ್ರಾಣಿ ದಯಾ ಸಂಘದವರದ್ದು ಕಾಟವಾಗಿದೆ. ಅವರ‌ ಮನೆಗಳಿಗೆ ನಾಯಿಗಳನ್ನು ಬಿಡುವಂತೆ ಕಿಚಾಯಿಸಿದ ಬೋಜೇಗೌಡ, ನಾನು ಈ ಹಿಂದೆ ಸಿಎಂಸಿ ಅಧ್ಯಕ್ಷನಾಗಿದ್ದಾಗ 2 ಸಾವಿರಕ್ಕೂ ನಾಯಿಗಳನ್ನು ಸಾಯಿಸಿ ತೆಂಗಿನ ಮರಗಳಿಗೆ ಗೊಬ್ಬರ ಮಾಡಿಸಿದ್ದೆ ಎಂದರು.

ಬೀದಿ ನಾಯಿಗಳ ದಾಳಿ ಸಮಸ್ಯೆ ಗಂಭೀರವಾಗಿದ್ದು, ಸರ್ಕಾರವು ಈ ಬಗ್ಗೆ ಕಾನೂನು ಸಲಹೆ ಪಡೆದು ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸುವಂತೆ ಸಲಹೆ ನೀಡಿದರು. ಈ ಬಗ್ಗೆ ಉತ್ತರಿಸಿದ ಪೌರಾಡಳಿತ ಸಚಿವ ರಹೀಂಖಾನ್, ಬೀದಿ ನಾಯಿ ಹಾವಳಿ ವಿಚಾರ ಸಂಬಂಧಿಸಿದಂತೆ ಶೀಘ್ರದಲ್ಲಿ ಸಭೆ ಕರೆಯುತ್ತೇನೆ. ಸಮಸ್ಯೆ ನಿವಾರಣೆಗೆ ಯಾಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಪರಿಶೀಲಿಸಿ, ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸುತ್ತೇನೆ ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ