Breaking News

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ವಿರುದ್ಧ ಬಲವಂತದ ಕ್ರಮ ಬೇಡವೆಂದ ಹೈಕೋರ್ಟ್

Spread the love

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣ ಸಂಬಂಧ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿರುವ ಕೆ.ಆರ್. ಪುರ ಶಾಸಕ ಬೈರತಿ ಬಸವರಾಜ್ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಹೈಕೋರ್ಟ್ ತನಿಖಾಧಿಕಾರಿಗೆ ಸೂಚಿಸಿದೆ. ಇದರಿಂದ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಶಾಸಕ ಬೈರತಿ ಸದ್ಯಕ್ಕೆ ನಿರಾಳರಾಗಿದ್ದಾರೆ.

ಪ್ರಕರಣ ಸಂಬಂಧ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಪ್ರಕರಣದ ಐದನೇ ಆರೋಪಿ ಬೈರತಿ ಬಸವರಾಜ್ ಸಲ್ಲಿಸಿರುವ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ವಿಚಾರಣೆ ವೇಳೆ ಬೈರತಿ ಬಸವರಾಜ್ ಪರ ವಕೀಲರು, ”ಅರ್ಜಿ ಸಂಬಂಧ ಜುಲೈ 18ರಂದು ಹೈಕೋರ್ಟ್ ನೀಡಿದ ನಿರ್ದೇಶನದಂತೆ ತನಿಖಾಧಿಕಾರಿಗಳ ಮುಂದೆ ಅರ್ಜಿದಾರರು ಹಾಜರಾಗಿದ್ದರು. ಈವರೆಗಿನ ತನಿಖೆಗೆ ಸಂಪೂರ್ಣವಾಗಿ ಸಹಕಾರ ನೀಡಿದ್ದಾರೆ. ಮುಂದೆಯೂ ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧರಿದ್ದಾರೆ” ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಈ ಅಂಶವನ್ನು ದಾಖಲಿಸಿಕೊಂಡ ನ್ಯಾಯಪೀಠ, ”ಕಾನೂನು ಪ್ರಕಾರ ತನಿಖೆ ನಡೆಯಲಿದೆ. ತನಿಖೆಗೆ ಅರ್ಜಿದಾರರು ತನಿಖೆಗೆ ಅಗತ್ಯ ಸಹಕಾರ ನೀಡಲಿ. ಆದರೆ ತನಿಖಾಧಿಕಾರಿಗಳು ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಜರುಗಿಸುವಂತಿಲ್ಲ” ಎಂದು ಸೂಚಿಸಿ ವಿಚಾರಣೆ ಮುಂದೂಡಿತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ