Breaking News

ಕಳೆದ ಮೂರು ವರ್ಷದಿಂದ ರೈತರಿಗೆ ಬೆಳೆ ಸಾಲ ನೀಡದಿರುವುದನ್ನು ಖಂಡಿಸಿ ಉಪವಾಸ ಸತ್ಯಾಗ್ರಹ

Spread the love

ಬೆಳಗಾವಿ ತಾಲೂಕಿನ ಮುತಗಾ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಂಘದಿಂದ ಕಳೆದ ಮೂರು ವರ್ಷದಿಂದ ರೈತರಿಗೆ ಬೆಳೆ ಸಾಲ ನೀಡದಿರುವುದನ್ನು ಖಂಡಿಸಿ ಕಳೆದ ನಾಲ್ಕು ದಿನದಿಂದ ಇಲ್ಲಿನ ಗ್ರಾಮಸ್ಥ ಸಚಿನ್ ಪಾಟೀಲ್ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
May be an image of 14 people, people studying and text
ಕಳೆದ ಮೂರು ವರ್ಷಗಳಿಂದ ಮುತಗಾ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನಲ್ಲಿ ರೈತರಿಗೆ ಬೆಳೆಸಾಲ ನೀಡುತ್ತಿಲ್ಲ. ಸಂಬಂಧಿಸಿದ ಅಧಿಕಾರಿಗಳಿಗೆ ಕೇಳಿದರೆ ಡಿಸಿಸಿ ಬ್ಯಾಂಕ್ ನಿಂದ ಬಂದಿಲ್ಲ ಎಂದು ಸಬೂಬು ಹೇಳುತ್ತಿದ್ದಾರೆ ಎನ್ನುವ ಆರೋಪ ಸಚಿನ ಮಾಡಿದ್ದಾರೆ.May be an image of 3 people
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿನ ಪಾಟೀಲ್ ಮುತಗಾ ಪ್ರಾಥಮಿಕ ಕೃಷಿ ಪತ್ತಿನ ಸಂಘದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಇಲ್ಲಿನ ಗ್ರಾಪಂ ಅಧಿಕಾರಿಗಳು ಕಳೆದ ಮೂರು ವರ್ಷಗಳಿಂದ ರೈತರಿಗೆ ಬೆಳೆಸಾಲ ನೀಡಿಲ್ಲ.May be an image of 9 people and text
ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಜಿಲ್ಲೆಯ ರೈತರಿಗೆ ಸಾಲ ನೀಡಿರುವುದಾಗಿ ಘೋಷಣೆ ಮಾಡಿದೆ. ಆದರೆ ಮುತಗಾ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಂಘದಿಂದ ಕಳೆದ ಮೂರು ವರ್ಷದಿಂದ ರೈತರಿಗೆ ಬೆಳೆ ಸಾಲ ನೀಡಿಲ್ಲ‌.
ಎಲ್ಲಿಯವರೆಗೆ ಮುತಗಾ ಗ್ರಾಮದ ರೈತರಿಗೆ ಬೆಳೆ ಸಾಲ ಕೊಡುವುದಿಲ್ಲವೋ ಅಲ್ಲಿಯವರೆಗೂ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಎಂದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ