Breaking News

ದ್ವಿಸದಸ್ಯ ಪೀಠದಿಂದ ಈ ಆದೇಶ ಹೊರಬಿದ್ದಿದೆ. ಪರಿಣಾಮ, ದರ್ಶನ್ ಮತ್ತೆ ಜೈಲು ಸೇರಲಿದ್ದಾರೆ.

Spread the love

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್, ಪವಿತ್ರಾ ಗೌಡ ಮತ್ತು ಇತರರಿಗೆ ನೀಡಿದ್ದ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ಪೂರ್ಣಗೊಂಡಿದ್ದು, ಇಂದು ಅರ್ಜಿಯ ತೀರ್ಪು ಪ್ರಕಟವಾಗಿದೆ. ನಟ ದರ್ಶನ್, ನಟಿ ಪವಿತ್ರಾಗೌಡ ಸೇರಿದಂತೆ 7 ಜನ ಆರೋಪಿಗಳ ಜಾಮೀನು ರದ್ದಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಬಳಿಕ 2024ರ ಜೂನ್ 11ರಂದು ನಟ ದರ್ಶನ್, ಪವಿತ್ರಾ ಗೌಡ ಸೇರಿ ಹಲವರು ಬಂಧನಕ್ಕೊಳಗಾದರು.
ಹತ್ಯೆ ಆರೋಪ ಹೊತ್ತ ನಟ ದರ್ಶನ್ ಮತ್ತು ತಂಡ ಹಲವು ತಿಂಗಳು ಸೆರೆಮನೆವಾಸ ಅನುಭವಿಸಬೇಕಾಯಿತು. ನಂತರ ವೈದ್ಯಕೀಯ ಆಧಾರದ ಮೇಲೆ ಜಾಮೀನು ದೊರಕಿತ್ತು. ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜನಪ್ರಿಯ ನಟ ದರ್ಶನ್ ತೂಗುದೀಪ ಅವರಿಗೆ ನೀಡಲಾಗಿರುವ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ.
ಜನಪ್ರಿಯತೆ, ಅಧಿಕಾರ ಅಥವಾ ಸವಲತ್ತು ಏನೇ ಇರಲಿ, ಕಾನೂನಿನೆದುರು ಎಲ್ಲರೂ ಸಮಾನರು ಎಂದು ಸುಪ್ರೀಂ ಕೋರ್ಟ್ ಹೇಳಿದೆ.ಡಿಸೆಂಬರ್ 13, 2024 ರಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶ ರದ್ದಾಗಿದೆ.
ಕಳೆದ ತಿಂಗಳು, ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ ಪೀಠ ಆದೇಶವನ್ನು ಕಾಯ್ದಿರಿಸಿತ್ತು. ಸುಪ್ರೀಂ ಕೋರ್ಟ್ನ ನ್ಯಾ. ಜೆ.ಬಿ. ಪರ್ದಿವಾಲಾ, ನ್ಯಾ. ಆರ್. ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಹೊರಬಿದ್ದಿದೆ. ಪರಿಣಾಮ, ದರ್ಶನ್ ಮತ್ತೆ ಜೈಲು ಸೇರಲಿದ್ದಾರೆ.
ನಟ ದರ್ಶನ ಜೊತೆ ಪವಿತ್ರಾಗೌಡ, ಎ6, ಜಗದೀಶ್ ಅಲಿಯಾಸ ಜಗ್ಗ, ಎ7, ಅನುಕುಮಾರ್ ಅಲಿಯಾಸ ಅನು, ಎ14, ಪ್ರದೂಶ್, ಎ11, ನಾಗರಾಜು ಅಲಿಯಾಸ ನಾಗ, ಎ12, ಲಕ್ಷ್ಮಣ್ ಜಾಮೀನು ಕೂಡ ರದ್ದಾಗಿದೆ.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ