ಚಿಕ್ಕೋಡಿ ನಗರದ ಆರ್.ಡಿ. ಹೈಸ್ಕೂಲ್ ಮೈದಾನದಲ್ಲಿ ಇಂದು ತಾಲೂಕು ಆಡಳಿತದ ನೇತೃತ್ವದಲ್ಲಿ ಆಯೋಜಿಸಿದ್ದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಂಸದೆ ಕುಮಾರಿ ಪ್ರಿಯಾಂಕಾ ಜಾರಕಿಹೊಳಿ..

ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ತ್ಯಾಗ ಮಾಡಿದ ಎಲ್ಲ ಮಹನೀಯರನ್ನು ಸ್ಮರಿಸಿ, ಅವರ ಬಲಿದಾನದಿಂದ ನಾವು ಪಡೆದಿರುವ ಸ್ವಾತಂತ್ರ್ಯವನ್ನು ಕಾಪಾಡಿಕೊಳ್ಳುವ ಸಂಕಲ್ಪ ಮಾಡಬೇಕೆಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಾಯಿತು.

ಇದೇ ಸಂದರ್ಭದಲ್ಲಿ, 2024-25ನೇ ಸಾಲಿನ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ 3 ಅಂಬ್ಯುಲೇನ್ಸ್‌ಗಳ ಉದ್ಘಾಟನೆ ನೆರವೇರಿಸಲಾಯಿತು.
ತುರ್ತು ವೈದ್ಯಕೀಯ ಸೇವೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಈ ಅಂಬ್ಯುಲೇನ್ಸ್‌ಗಳನ್ನು ಚಿಕ್ಕೋಡಿಯ ತಾಯಿ ಮತ್ತು ಮಗು ಆಸ್ಪತ್ರೆ, ಕಣಗಲಾ ಹಾಗೂ ಕಬ್ಬೂರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹಸ್ತಾಂತರಿಸಲಾಯಿತು.

ಈ ವೇಳೆ ಹಿರಿಯರು ಹಾಗೂ ವಿ.ಪ.ಸದಸ್ಯರಾದ ಶ್ರೀ ಪ್ರಕಾಶ ಹುಕ್ಕೇರಿ ಅವರು, ಶಾಸಕರಾದ ಶ್ರೀ ಗಣೇಶ ಹುಕ್ಕೇರಿ, ಚಿಕ್ಕೋಡಿ ಉಪ ವಿಭಾಗಾಧಿಕಾರಿ ಶ್ರೀ ಎಸ್.ಎಸ್. ಸಂಪಗಾವಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶ್ರೀ ಲಕ್ಷಣರಾವ್ ಚಿಂಗಳೆ, ಮುಖಂಡರಾದ ಶ್ರೀ ಮಹಾವೀರ ಮೊಹಿತೆ, ಮಾಜಿ ವಿ.ಪ. ಸದಸ್ಯರಾದ ಶ್ರೀ ಜಗದೀಶ ಕವಟಗಿಮಠ ಹಾಗೂ ಅಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Laxmi News 24×7