Breaking News
Home / ಜಿಲ್ಲೆ / ಬೆಳಗಾವಿ / ಸದ್ದಿಲ್ಲದೇ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಆಟ ಶುರು ಮಾರಿಹಾಳ ಗ್ರಾಮ ಪಂಚಾಯತಿಯ ಐವರು ಸದಸ್ಯರು ಅವಿರೋಧ ವಾಗಿ ಆಯ್ಕೆ

ಸದ್ದಿಲ್ಲದೇ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಆಟ ಶುರು ಮಾರಿಹಾಳ ಗ್ರಾಮ ಪಂಚಾಯತಿಯ ಐವರು ಸದಸ್ಯರು ಅವಿರೋಧ ವಾಗಿ ಆಯ್ಕೆ

Spread the love

ಬೆಳಗಾವಿ-ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಸದ್ದಿಲ್ಲದೇ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಆಟ ಶುರು ಮಾಡಿದ್ದಾರೆ. ಗ್ರಾಮ ಮಟ್ಟದಿಂದಲೇ ಸಂಘಟನೆ ಕಟ್ಟುತ್ತಿರುವ ರಮೇಶ್ ಜಾರಕಿಹೊಳಿ ಅವರು ಗ್ರಾಮ ಪಂಚಾಯ್ತಿ ಚುನಾವಣೆಯಲ್ಲೂ ಕೈಯಾಡಿಸಿದ್ದು ಈಗ ಗುಟ್ಟಾಗಿ ಉಳಿದಿಲ್ಲ.

ಯಾಕಂದ್ರೆ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲೂ ಅಪಾರ ಅಭಿಮಾನಿಗಳನ್ನು ಹೊಂದಿದ್ದು.ಸಾಹುಕಾರ್ ರಮೇಶ್ ಗ್ರಾಮ ಪಂಚಾಯತ್ ಚುನಾವಣೆಯಲ್ಲಿಯೂ ಈ ಕ್ಷೇತ್ರದಲ್ಲಿ ಬೀಜ ಬೀತ್ತಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮ ಪಂಚಾಯತಿಯ ಐವರು ಸದಸ್ಯರು ಅವಿರೋಧ ವಾಗಿ ಆಯ್ಕೆ ಆಗಿದ್ದು ಇವರೆಲ್ಲರೂ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ,ಉಚಗಾಂವ,ಬೆಳಗುಂದಿ,ತುರಮರಿ ಸೇರಿದಂತೆ ಈ ಕ್ಷೇತ್ರದ ಹಲವಾರು ಗ್ರಾಮಗಳಲ್ಲಿ ರಮೇಶ್ ಜಾರಕಿಹೊಳಿ ಅವರ ಅಭಿಮಾನಿಗಳು ಚುನಾವಣೆಗೆ ಸ್ಪರ್ದೆ ಮಾಡಿದ್ದು ಫಲಿತಾಂಶ ಹೊರಬಿದ್ದ ಬಳಿಕ ಸಾಹುಕಾರ್ ಯಾವ,ಯಾವ ಗ್ರಾಮಗಳಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ ಎಂಬುದು ಗೊತ್ತಾಗಲಿದೆ.

ಎಪಿಎಂಸಿ ಅದ್ಯಕ್ಷ ಯುವರಾಜ ಕದಂ ಅವರು ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ತಮ್ಮದೇ ಆದ ಸೈನ್ಯ ಕಟ್ಟಿಕೊಂಡಿದ್ದು ಅವರೂ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕೈಚಳಕ ತೋರಿಸಿದ್ದಾರೆ ಎಂದು ಗೊತ್ತಾಗಿದೆ.

ಒಟ್ಟಾರೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮೌನ ರಾಜಕೀಯ ಕ್ರಾಂತಿ ನಡೆಯುತ್ತಿದೆ.ಅನ್ನೋದಕ್ಕೆ ಈ ಸುದ್ಧಿಯಲ್ಲಿನ ಚಿತ್ರವೇ ಅದಕ್ಕೆ ಸಾಕ್ಷಿಯಾಗಿದೆ.ಮಾರಿಹಾಳ ಗ್ರಾಮ ಪಂಚಾಯತಿಯ 18 ಸದಸ್ಯರ ಪೈಕಿ,ಬಸವರಾಜ ಮಾದಮ್ಮನವರ, ಮಲ್ಲವ್ವ
ಕುಳ್ಳನ್ನವರ, ರೇಖಾ ತಳವಾರ, ಗಂಗವ್ವ
ಅಮಾತಿ ಹಾಗೂ ತೌಸೀಫ ಫಣಿಬಂಧ
ಅವಿರೋಧ ಆಯ್ಕೆಯಾಗಿದ್ದಾರೆ.ಅವರೆಲ್ಲರೂ ಸಾಹುಕಾರ್ ರಮೇಶ್ ಜಾರಕಿಹೊಳಿ ಅವರಿಗೆ ಧನ್ಯವಾದ ಹೇಳಿದ್ದು. ಈ ಸಂಧರ್ಭದಲ್ಲಿ,ಬೆಳಗಾವಿ ಗ್ರಾಮಾಂತರ ಬಿಜೆಪಿ ಜಿಲ್ಲಾ ಖಂಜಾಚಿ ಮಲ್ಲಿಕಾರ್ಜುನ
ಮಾದಮ್ಮನವರ, ಗ್ರಾಮದ ಹಿರಿಯರಾದ
ಮಹಾಂತಯ್ಯ ಪೂಜಾರ, ವಿಠಲ ಮಲ್ಲಾರಿ ಇತರರು ಇದ್ದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ