Home / ಅಂತರಾಷ್ಟ್ರೀಯ / ದೇಶದಲ್ಲಿ ಕೊರೊನಾ ಬಾಧಿತರ ಸಂಖ್ಯೆ 9 ಲಕ್ಷ ಗಡಿ ದಾಟಿದೆ.

ದೇಶದಲ್ಲಿ ಕೊರೊನಾ ಬಾಧಿತರ ಸಂಖ್ಯೆ 9 ಲಕ್ಷ ಗಡಿ ದಾಟಿದೆ.

Spread the love

ನವದೆಹಲಿ,ಜು.14-ದೇಶದಲ್ಲಿ ಕೊರೊನಾ ಬಾಧಿತರ ಸಂಖ್ಯೆ 9 ಲಕ್ಷ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ 28,498 ಜನರಿಗೆ ಸೋಂಕು ತಗುಲಿದ್ದು, 533 ಮಂದಿ ಸಾವನ್ನಪ್ಪಿದ್ದಾರೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ವಿವಿಧ ರಾಜ್ಯಗಳಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಿದೆ. ಇದನ್ನು ನಿಯಂತ್ರಿಸುವ ಸಲುವಾಗಿ ಲಾಕ್‍ಡೌನ್ ಸೇರಿದಂತೆ ವಿವಿಧ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದು ಅನಿವಾರ್ಯವಾಗಿದೆ.

ಇದಕ್ಕೆ ಜನರು ಸ್ಪಂದಿಸಬೇಕು ಎಂದು ಕೋರಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 9,07,645ಕ್ಕೆ ಏರಿದ್ದು, ಸಾವಿನ ಸಂಖ್ಯೆ 23,727ಕ್ಕೆ ತಲುಪಿದೆ. ಇದರ ನಡುವೆ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗುತ್ತಿರುವವರ ಸಂಖ್ಯೆಯೂ ಕೂಡ ಶೇ.63ಕ್ಕೆ ಏರಿಕೆ ಕಂಡಿದೆ.

ಮಹಾರಾಷ್ಟ್ರದಲ್ಲಿ ಅತಿಹೆಚ್ಚು ಸೋಂಕಿತರು ಪತ್ತೆಯಾಗಿದ್ದು, ಪುಣೆ, ನಾಗಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ.ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಕೂಡ ಸೋಂಕಿತರ ಸಂಖ್ಯೆ ಹೆಚ್ಚಿದ್ದು, ಪ್ಲಾಸ್ಮ ಚಿಕಿತ್ಸೆ ಹೊಸ ಭರವಸೆ ನೀಡಿದ್ದು, ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಈಗ ಕೊರೊನಾ ಸೋಂಕಿನಿಂದ ಗುಣಮುಖರಾದವರು ಪ್ಲಾಸ್ಮಾವನ್ನು ದಾನ ಮಾಡಿ ಮಾನವೀಯತೆ ತೋರಬೇಕು ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಪ್ಲಾಸ್ಮಾ ಬ್ಯಾಂಕ್‍ನ್ನು ಕೂಡ ತೆರೆಯಲಾಗಿದೆ.


Spread the love

About Laxminews 24x7

Check Also

100 ರನ್​ಗಳಿಂದ ಗೆದ್ದ ಭಾರತ; ವಿಶ್ವಕಪ್​ನಿಂದ ಹೊರಬಿದ್ದ ಹಾಲಿ ಚಾಂಪಿಯನ್ …

Spread the loveಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಹೈವೋಲ್ಟೇಜ್ ವಿಶ್ವಕಪ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ