ಬೆಂಗಳೂರು, : ಆರ್‌ಎಸ್‌ಎಸ್ ಭಾರತದ ತಾಲಿಬಾನ್ (RSS Indian Taliban) ಇದ್ದಂತೆ ಎಂದು ಕರ್ನಾಟಕ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ (BK Hariprasad) ಕಿಡಿಕಾರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್‌ಎಸ್‌ಎಸ್ ಹೊಗಳಿದ್ದಕ್ಕಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಶನಿವಾರ ಹರಿ ಪ್ರಸಾದ್, ಆರ್‌ಎಸ್‌ಎಸ್ ನವರು ದೇಶದಲ್ಲಿ ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ನಾನು ಆರ್‌ಎಸ್‌ಎಸ್ ಅನ್ನು ತಾಲಿಬಾನ್‌ಗೆ ಹೋಲಿಸುತ್ತೇನೆ. ಅವರು ಭಾರತೀಯ ತಾಲಿಬಾನ್‌ಗಳು ಮತ್ತು ಪ್ರಧಾನಿ ಅವರನ್ನು ಕೆಂಪು ಕೋಟೆಯಿಂದ ಶ್ಲಾಘಿಸುತ್ತಿದ್ದಾರೆ” ಎಂದು ಜರಿದಿದ್ದಾರೆ.
ಸ್ವಾತಂತ್ರ ಹೋರಾಟದಲ್ಲಿ ಸಂಘ ಪರಿವಾರದವರು ಪಾಲ್ಗೊಂಡಿದ್ದಾರೆಯೇ ಎಂದು ಪ್ರಶ್ನಿಸಿದ ಹರಿಪ್ರಸಾದ್, ಆರ್ ಎಸ್ಎಸ್ ನೊಂದಣಿ ಆಗಿರುವ ಸಂಘಟನೆ ಅಲ್ಲ. ಇಡೀ ದೇಶದಲ್ಲಿ ದೊಡ್ಡ ಸಂಘಟನೆ ಎಂದು ಬಿಂಬಿಸಿಕೊಳ್ಳುತ್ತಾರೆ. ಆದ್ರೆ, ಅವರಿಗೆ ಹಣ ಎಲ್ಲಿಂದ ಬರುತ್ತೆ. ಇತಿಹಾಸವನ್ನು ತಿರುಚುವುದರಲ್ಲಿ ಆರ್ ಎಸ್ಎಸ್ ಹಾಗೂ ಬಿಜೆಪಿಯವರು ಪ್ರವೀಣರು. ಕಳೆದ 52 ವರ್ಷಗಳಿಂದ ಆರ್ ಎಸ್ಎಸ್ ಕಚೇರಿ ಮೇಲೆ ತ್ರಿವರ್ಣಧ್ವಜ ಹಾರಿಸಿಲ್ಲ ಏಕೆ? ದೇಶಕ್ಕಾಗಿ ಪ್ರಾಣ ತೆತ್ತವರ ಹೆಸರನ್ನು ಹೇಳುವುದನ್ನು ಬಿಟ್ಟು ಓಲೈಕೆಗಾಗಿ ಮೋದಿಯವರು ಆರ್ ಎಸ್ಎಸ್ ಅನ್ನು ಹೊಗಳಿದ್ದು ಸರಿಯಲ್ಲಿ ಎಂದು ವಾಗ್ದಾಳಿ ನಡೆಸಿದರು.
Laxmi News 24×7