Breaking News

ಬೆಳಗಾವಿ ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗೆ ಅಧ್ಯಕ್ಷರ ಅವಿರೋಧ ಆಯ್ಕೆ!! ನಾಲ್ಕು ಸ್ಥಾಯಿ ಸಮಿತಿಗೆ ಅಧ್ಯಕ್ಷರ ಅವಿರೋಧ ಆಯ್ಕೆ

Spread the love

ಬೆಳಗಾವಿ ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗೆ ಅಧ್ಯಕ್ಷರ ಅವಿರೋಧ ಆಯ್ಕೆ!!
ನಾಲ್ಕು ಸ್ಥಾಯಿ ಸಮಿತಿಗೆ ಅಧ್ಯಕ್ಷರ ಅವಿರೋಧ ಆಯ್ಕೆ
ಸೋಮವಾರ ಜರುಗಿದ ಸ್ಥಾಯಿ ಸಮಿತಿ ಚುನಾವಣೆ
ನೂತನ ಅಧ್ಯಕ್ಷರನ್ನು ಅಭಿನಂದಿಸಿದ ಮೇಯರ ಹಾಗೂ ಉಪಮೇಯರ
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಹೊಸ ಇತಿಹಾಸ
ಯಾರಿಗೂ ಮನಸ್ತಾಪ ಬಾರದ ಹಾಗೆ ಮತ್ತು ಸಮಾನ ನ್ಯಾಯ ಕೊಡುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗೆ ಅವಿರೋಧವಾಗಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.
ಯಾರಿಗೂ ಮನಸ್ತಾಪ ಬಾರದ ಹಾಗೆ ಮತ್ತು ಸಮಾನ ನ್ಯಾಯ ಕೊಡುವ ನಿಟ್ಟಿನಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗೆ ಶಾಸಕ ಅಭಯ ಪಾಟೀಲ ಮತ್ತು ಮಾಜಿ ಶಾಸಕ ಅನಿಲ ಬೆನಕೆ ಮಾರ್ಗದರ್ಶನದಲ್ಲಿ ಈ ಅವಿರೋಧ ಆಯ್ಕೆ ಪ್ರಕ್ರಿಯೆ ಜರುಗಿ ಹೊಸ ಇತಿಹಾಸ ಸೃಷ್ಠಿಸಿದೆ.
ತೆರಿಗೆ ನಿರ್ಧರಣೆ, ಹಣಕಾಸು ಹಾಗು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರೇಖಾ ಮೋಹನ ಹೂಗಾರ, ಸಾರ್ವಜನಿಕ ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾಗಿ ಲಕ್ಷ್ಮೀ ಮಹಾದೇವ ರಾಠೋಡ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮಾಧವಿ ರಾಘೋಚೆ ಮತ್ತು ಲೆಕ್ಕಗಳ ಸ್ಥಾಯಿ ಸಮಿತಿಗೆ ನಂದು ಮಿರಜಕರ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು.ನೂತನವಾಗಿ ಆಯ್ಕೆಗೊಂಡವರನ್ನು ಮೇಯರ್ ಮಂಗೇಶ ಪವಾರ, ಉಪಮೇಯರ್ ವಾಣಿ ಜೋಶಿ, ಆಡಳಿತ ಪಕ್ಷದ ನಾಯಕ ಹನುಮಂತ ಕೊಂಗಾಲಿ ಅಭಿನಂದಿಸಿದರು.

Spread the love

About Laxminews 24x7

Check Also

ಈ ವರ್ಷ 5 ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್​​ಕೆಜಿ, ಯುಕೆಜಿ ಕಾರ್ಯಾರಂಭ: ಸಚಿವ ಮಧು ಬಂಗಾರಪ್ಪ

Spread the love ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸಲು ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ