ವಿವಿಧ ಬೇಡಿಕೆ ಈಡೇರಿಕೆಗೆ ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ!!
ಕನಿಷ್ಠ ವೇತನ ತಿಂಗಳಿಗೆ 36 ಸಾವಿರಕ್ಕೆ ಆಗ್ರಹ
ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ
ಹೊರಗುತ್ತಿಗೆ ನೌಕರರ ಬೆಳಗಾವಿ ಜಿಲ್ಲಾ ಘಟಕ
ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ
ರಾಜ್ಯ ಸರ್ಕಾರ ಹಾಗೂ ಕಾರ್ಮಿಕ ಇಲಾಖೆ ಜಾರಿಗೆ ತಂದಿರುವ ಕನಿಷ್ಠ ವೇತನ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹೊರಗುತ್ತಿಗೆ ನೌಕರರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಸೋಮವಾರ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಆಶ್ರಯದಲ್ಲಿ ನಡೆಯುತ್ತಿರುವ ವಸತಿ ಶಾಲೆಗಳಲ್ಲಿ ಹೊರ ಗುತ್ತಿಗೆ ಆಧಾರ ಮೇಲೆ ಕಾರ್ಯನಿರ್ವಿಸುತ್ತಿರುವ ಅಡುಗೆಯವರು, ಅಡುಗೆ ಸಹಾಯಕರು, ರಾತ್ರಿ ಕಾವಲುಗಾರರು ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಜಿಲ್ಲಾ ಘಟಕದ ಆಶ್ರಯದಲ್ಲಿ ರಾಜ್ಯ ಸರ್ಕಾರ ಹಾಗೂ ಕಾರ್ಮಿಕ ಇಲಾಖೆ ಜಾರಿಗೆ ತಂದಿರುವ ಕನಿಷ್ಠ ವೇತನ ಜಾರಿ,ಕನಿಷ್ಠ ವೇತನ ತಿಂಗಳಿಗೆ 36 ಸಾವಿರ, ನಿವೃತ್ತಿಯಾದ ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿಗಳಿಗೆ ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸಿ ಡಿಸಿ ಮೂಲಕ ಸಿಎಂ ಅವರಿಗೆ ಮನವಿ ರವಾಣಿಸಿದರು.
ಹುರಗುತ್ತಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಪ್ರದೀಪ ದಳವಾಯಿ ಮಾತನಾಡಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಆಶ್ರಯದಲ್ಲಿ ನಡೆಯುತ್ತಿರುವ ವಸತಿ ಶಾಲೆಗಳಲ್ಲಿ ಹೊರ ಗುತ್ತಿಗೆ ಆಧಾರ ಮೇಲೆ ಕಾರ್ಯನಿರ್ವಿಸುತ್ತಿರುವ ಅಡುಗೆಯವರು, ಅಡುಗೆ ಸಹಾಯಕರು, ರಾತ್ರಿ ಕಾವಲುಗಾರರ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ 2012ರಿಂದ ಒತ್ತಾಯಿಸುತ್ತ ಬಂದಿದ್ದೇವೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಂಬಂಧಿಸಿದ ಅಧಿಕಾರಿಗಳ ಸಭೆ ನಡೆಯಬೇಕು ಎಂದರು.
ಲಗಮಪ್ಪಾ ಹರಿಜನ, ರಾಜು ಮ್ಯಾರೇನವರ, ಶಾಂತಪ್ಪಾ ಕಾಳಿಂಗೆ, ಕಲ್ಪನಾ ಕುರವಿರ, ರಮೇಶ ಭಜಂತ್ರಿ, ಮನೋಜಕುಮಾರ ಸುನಗಾರ, ಮಂತನ್ ಕೋಲಕಾರ ಸೇರಿದಂತೆ ಮುಂತಾದವರು ಈ ಸಂದರ್ಭದಲ್ಲಿದ್ದರು.
Laxmi News 24×7