Breaking News

ರಾಜ್ಯದ ಹಲವು ಭಾಗಗಳಲ್ಲಿ ಇನ್ನು ಐದು ದಿನ ಭಾರೀ ಮಳೆ ಮುನ್ಸೂಚನೆ

Spread the love

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳು ಸೇರಿದಂತೆ ಹಲವು ಭಾಗಗಳಲ್ಲಿ ಇನ್ನು ಐದು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಐದು ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 40-50ಕಿ.ಮೀ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

11 ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಆರೆಂಜ್​ ಅಲರ್ಟ್​ ಘೋಷಣೆ: ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಗದಗ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಿಗೆ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲೂ ಭಾರಿ ಮಳೆ ಮುನ್ಸೂಚನೆ: ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ದೇಶದ ಹಲವು ಭಾಗದಲ್ಲಿ ಭಾರಿಯಿಂದ ಅತಿ ಹೆಚ್ಚು ಮಳೆಯಾಗುತ್ತಿದ್ದು, ವಿಶೇಷವಾಗಿ ದಕ್ಷಿಣ, ಪೂರ್ವ ಮತ್ತು ಪಶ್ಚಿಮ, ಕೇಂದ್ರ ಭಾರತದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎರಡು ದಿನ ರಾಜ್ಯದ ಕರಾವಳಿಯಲ್ಲಿ ಧಾರಾಕಾರ ಮಳೆ ಮುನ್ಸೂಚನೆ: ಆಂಧ್ರಪ್ರದೇಶ ಕರಾವಳಿ, ದಕ್ಷಿಣ ಛತ್ತೀಸ್​ಗಢ, ದಕ್ಷಿಣ ಒಡಿಶಾ, ತೆಲಂಗಾಣ, ಕರ್ನಾಟಕದ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗಲಿದೆ. ಮುಂಬೈ, ಗೋವಾ ಸೇರಿದಂತೆ ಕೊಂಕಣ, ಮಹಾರಾಷ್ಟ್ರ ಘಾಟ್​ ಹಾಗೂ ಕರ್ನಾಟಕದ ಕರಾವಳಿ ಮತ್ತು ಗುಜರಾತ್​ನಲ್ಲಿ ಇಂದು ಮತ್ತು ನಾಳೆ ಅಂದರೆ, ಆಗಸ್ಟ್​ 19 ಮತ್ತು 20 ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಬೆಳಗಾವಿ – ಧಾರವಾಡ ಜಿಲ್ಲೆಗಳಲ್ಲಿ ಇಂದೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ:

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಎಂಟು ಹಾಗೂ ಧಾರವಾಡ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಮಂಗಳವಾರ ಅಂದರೆ ಇಂದು ರಜೆ ಘೋಷಿಸಿಲಾಗಿದೆ.

ಬೆಳಗಾವಿ ಡಿಸಿ ಆದೇಶ: ಬೆಳಗಾವಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಹಲವು ತಾಲೂಕಿನ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ-ಕಾಲೇಜುಗಳಿಗೆ ಮಂಗಳವಾರವೂ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ