Breaking News

ರಿಜಿಸ್ಟರ್ ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ ಮಾಡಿದ ಆರೋಪದಡಿ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ವಿರುದ್ಧ ಏರ್ಪೋರ್ಟ್​ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Spread the love

ಬೆಂಗಳೂರು : ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಜೀವ ಬೆದರಿಕೆಯೊಡ್ಡಿದ ಆರೋಪದಡಿ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ವಿರುದ್ಧ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ ಶ್ರೀಭಗವಾನ್ ಶರ್ಮಾ ಅಲಿಯಾಸ್ ಗುಡ್ಡು ಪಂಡಿತ್ ಎಂಬುವರು ತನ್ನನ್ನು ಬೆಂಗಳೂರಿಗೆ ಕರೆದುಕೊಂಡು ಬಂದಿದ್ದು, ಖಾಸಗಿ ಹೋಟಲ್​ನಲ್ಲಿ ಅತ್ಯಾಚಾರ ಎಸಗಿ, ಕೊಲೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದಾರೆ.

ಆಗಸ್ಟ್ 17 ರಂದು ಏರ್ಪೋರ್ಟ್​ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 69 (ಮೋಸದಿಂದ ಲೈಂಗಿಕತೆ) ಅಡಿಯಲ್ಲಿ ಈ ಬಗ್ಗೆ ದೂರು ದಾಖಲಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ತನನ್ನು ರಿಜಿಸ್ಟರ್ ಮದುವೆಯಾಗುವುದಾಗಿ ನಂಬಿಸಿದ ಆರೋಪಿಯು ಆಗಸ್ಟ್ 14ರಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಹೋಟೆಲ್​ಗೆ ಕರೆದುಕೊಂಡು ಬಂದಿದ್ದಾರೆ. ಬಳಿಕ ಬೆಂಗಳೂರು ಸೇರಿದಂತೆ ಚಿತ್ರದುರ್ಗ ಸುತ್ತಾಡಿಸಿದ್ದಾರೆ. ನಂತರ ಹೋಟೆಲ್​ವೊಂದರಲ್ಲಿ ನನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಹಾಗೂ ಈ ವಿಷಯ ಯಾರಿಗಾದರೂ ಹೇಳಿದಲ್ಲಿ ನಿನ್ನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಉತ್ತರ ಪ್ರದೇಶದವರೇ ಆದ ಸಂತ್ರಸ್ಥ ಮಹಿಳೆ ರ್ಪೋರ್ಟ್​ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಸಂತ್ರಸ್ಥ ಮಹಿಳೆ ನೀಡಿದ ದೂರಿನನ್ವಯ ಆಗಸ್ಟ್ 17 ರಂದು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 69 (ಮೋಸದಿಂದ ಲೈಂಗಿಕತೆ ) ಅಡಿ ಏರ್ಪೋರ್ಟ್​ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಲ್ಲದೇ ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ಕೂಡ ನಡೆಸಲಾಗುತ್ತದೆ ಎಂದು ಈಶಾನ್ಯ ವಲಯ ಡಿಸಿಪಿ ಸಜೀತ್ .ವಿ.ಜೆ ತಿಳಿಸಿದ್ದಾರೆ.

ದೂರಿನ ಸಾರಾಂಶ: 14.08.2025ರಂದು ಆರೋಪಿ ಶ್ರೀಭಗವಾನ್ ಶರ್ಮಾ ಅಲಿಯಾಸ್ ಗುಡ್ಡು ಪಂಡಿತ್ ಎಂಬುವರು ನನ್ನ ಮಗ ಸೇರಿದಂತೆ ನನ್ನನ್ನು ಬೆಂಗಳೂರಿನ ಹೋಟೆಲ್​ವೊಂದಕ್ಕೆ ಕರೆದುಕೊಂಡು ಬಂದಿದ್ದಾರೆ. ಕೋರ್ಟ್​ ಮ್ಯಾರೇಜ್​ ಆಗುವುದಾಗಿ ನಂಬಿಸಿ ಬೆಂಗಳೂರಿನ ಅನೇಕ ಕಡೆಗಳಲ್ಲಿ ಸುತ್ತಾಡಿಸಿದ್ದಾರೆ. 16.08.2025ರಂದು ಚಿತ್ರದುರ್ಗಕ್ಕೂ ಕರೆದುಕೊಂಡು ಹೋಗಿದ್ದು, ನಂತರ 17.08.2025ರಂದು ಮತ್ತೆ ಹೋಟೆಲ್​ಗೆ ಕರೆದುಕೊಂಡು ಬಂದಿದ್ದಾರೆ.​ 582 ಸಂಖ್ಯೆಯ ರೂಮ್​ ನಂಬರ್ ಬುಕ್​ ಮಾಡಿದ್ದು, ಈ ವೇಳೆ ನಾರ್ಮಲ್​ ಫೋಟೋ ಹಾಗೂ ವಿಡಿಯೋಗಳನ್ನು ತೆಗೆದುಕೊಂಡಿದ್ದಾರೆ. ಬಳಿಕ ಅತ್ಯಾಚಾರ ಮಾಡಿದ್ದು, ಈ ಬಗ್ಗೆ ವಿರೋಧಿಸಿದಾಗ ತನ್ನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಸಂತ್ರಸ್ತ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.


Spread the love

About Laxminews 24x7

Check Also

ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರಾಜೀನಾಮೆ

Spread the loveಮುಂಬೈ: ಅತ್ಯಾಚಾರ ಆರೋಪಿ ಹಾಗೂ ಖ್ಯಾತ ಜ್ಯೋತಿಷಿ ಅಶೋಕ್‌ ಖಾರಟ್ ಜತೆಗಿನ ಫೋಟೋಗಳು ಬಹಿರಂಗವಾದ ಹಿನ್ನೆಲೆಯಲ್ಲಿ, ಅವರೊಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ