Breaking News

ಕರ್ನಾಟಕದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಭಾರಿ ಹೆಚ್ಚಳ: ಎರಡೇ ವರ್ಷದಲ್ಲಿ ಶೇ 26 ರಷ್ಟು ಹೆಚ್ಚಾದ ಪೋಕ್ಸೊ ಕೇಸ್

Spread the love

ಕರ್ನಾಟಕದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಭಾರಿ ಹೆಚ್ಚಳ: ಎರಡೇ ವರ್ಷದಲ್ಲಿ ಶೇ 26 ರಷ್ಟು ಹೆಚ್ಚಾದ ಪೋಕ್ಸೊ ಕೇಸ್

 

ಬೆಂಗಳೂರು, ಆಗಸ್ಟ್ 19: ಕರ್ನಾಟಕದಲ್ಲಿ (Karnataka) ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂಬ ಪ್ರತಿಪಕ್ಷಗಳ ಆರೋಪ ಒಂದೆಡೆಯಾದರೆ, ಮಕ್ಕಳ ಮೇಲಿನ ಲೈಂಗಿಕ ಕಿರುಕುಳ, ದೌರ್ಜನ್ಯ ಪ್ರಕರಣಗಳ ಸಂಖ್ಯೆಯಲ್ಲೂ ಗಣನೀಯ ಏರಿಕೆಯಾಗಿರುವುದು ಗೊತ್ತಾಗಿದೆ. ಕೇವಲ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಪೋಕ್ಸೊ (Pocso) (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ಪ್ರಕರಣಗಳ ಸಂಖ್ಯೆ ಶೇ 26 ರಷ್ಟು ಹೆಚ್ಚಾಗಿರುವುದು ಅಂಕಿ ಅಂಶಗಳಿಂದ ತಿಳಿದುಬಂದಿದೆ. ವಿಧಾನ ಪರಿಷತ್ತಿಗೆ (Assembly Session) ಸರ್ಕಾರ ನೀಡಿದ ಮಾಹಿತಿಯ ಪ್ರಕಾರ, 2022 ರಲ್ಲಿ ಸುಮಾರು 3,209 ಪೋಕ್ಸೊ ಪ್ರಕರಣಗಳು ದಾಖಲಾಗಿದ್ದು, ಅದು 2024 ರ ವೇಳೆಗೆ 4,064 ಕ್ಕೆ ಏರಿಕೆಯಾಗಿದೆ. 2025 ರಲ್ಲಿ ಈವರೆಗೆ 2,544 ಪ್ರಕರಣಗಳು ದಾಖಲಾಗಿವೆ.

ಪೋಕ್ಸೊ ಪ್ರಕರಣಗಳು ಹೆಚ್ಚುತ್ತಿದ್ದರೂ, ಅವುಗಳಲ್ಲಿ ಸುಮಾರು ಮೂರನೇ ಒಂದು ಭಾಗದಷ್ಟು ಅಥವಾ ಅದಕ್ಕಿಂತ ಹೆಚ್ಚಿನ ಪ್ರಕರಣಗಳು ಖುಲಾಸೆಗೊಳ್ಳುತ್ತವೆ ಮತ್ತು ಶಿಕ್ಷೆಯ ಪ್ರಮಾಣ ಕಡಿಮೆ ಇರುತ್ತದೆ.

2022 ರಲ್ಲಿ ದಾಖಲಾದ 3,209 ಪ್ರಕರಣಗಳಲ್ಲಿ, 1,562 ಪ್ರಕರಣಗಳು ಖುಲಾಸೆಗೊಂಡಿದ್ದವು. ಕೇವಲ 186 ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಿತ್ತು. ಇನ್ನೂ 1,224 ಪ್ರಕರಣಗಳು ವಿಚಾರಣೆಯ ಹತದಲ್ಲಿವೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ