Breaking News

ಮುಳುಗಿದ ಲೋಳಸೂರ ಸೇತುವೆ: ಡಿಸಿ ಮೊಹಮ್ಮದ್ ರೋಷನ್ ಪರಿಶೀಲನೆ

Spread the love

ಬೆಳಗಾವಿ: ಘಟಪ್ರಭಾ ಹಾಗೂ ಮಾರ್ಕಂಡೇಯ ನದಿಗಳಿಂದ‌ ಮುಳುಗಡೆ ಆಗುವ ನಾಲ್ಕು ಸೇತುವೆಗಳನ್ನು ಹೊಸದಾಗಿ ನಿರ್ಮಿಸುವ ಯೋಜನೆ ಇದೆ. ಇದಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಧಿ ಅಡಿಯಲ್ಲಿ 11 ಕೋಟಿ ಅನುದಾನ ಲಭ್ಯ ಇದೆ. ಇದರ ಜೊತೆಗೆ ‌ಲೋಕೋಪಯೋಗಿ ಇಲಾಖೆಯಿಂದ ಮತ್ತಷ್ಟು ಅನುದಾನ ಪಡೆದು, ಬೇಸಿಗೆಯಲ್ಲಿ ಸೇತುವೆ ನಿರ್ಮಾಣ ಕೆಲಸ ಕೈಗೆತ್ತಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.DC inspects Lolasur bridge

ಘಟಪ್ರಭಾ ನದಿ ಪ್ರವಾಹದಿಂದ ಗೋಕಾಕ್ ನಗರದ ಬಳಿ ಇರುವ ಲೋಳಸೂರ ಸೇತುವೆ ಮುಳುಗಡೆ ಆಗಿರುವ ಹಿನ್ನೆಲೆಯಲ್ಲಿ ಇಂದು ಪರಿಶೀಲನೆ ನಡೆಸಿದ ಬಳಿಕ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದರು.ಲೋಳಸೂರ ಹಾಗೂ ಶಿಂಗಳಾಪುರ ಸೇತುವೆ ಪ್ರತಿವರ್ಷ ಮುಳುಗುತ್ತಿದೆ. ಇದರೊಂದಿಗೆ ಮಾರ್ಕಂಡೇಯ ‌ನದಿಯಿಂದಾಗಿ ಚಿಕ್ಕೋಳಿ ಸೇತುವೆ ಕೂಡ ಮುಳುಗುತ್ತವೆ. ರೈತರು ಹಾಗೂ ಜನರಿಗೆ ಸಾಕಷ್ಟು ನಷ್ಟವಾಗುತ್ತಿರುವುದು ಗಮನಕ್ಕೆ ಬಂದಿದೆ. ಇದರ‌ ಗಂಭೀರತೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಗಮನಕ್ಕೆ ತಂದು ಶಾಶ್ವತ ‌ಪರಿಹಾರವನ್ನು ಇದೇ ವರ್ಷ ಕಂಡುಕೊಳ್ಳಲಾಗುವುದು ಎಂದು ಹೇಳಿದರು.


Spread the love

About Laxminews 24x7

Check Also

ಕ್ಯಾಬಿನೆಟ್‌ನಲ್ಲಿ ಕನಿಷ್ಠ ಐದು ಪರಿಷತ್ ಸದಸ್ಯರಿಗೆ ಅವಕಾಶ ನೀಡಿ – ರಣದೀಪ್ ಸುರ್ಜೆವಾಲಾಗೆ MLCಗಳಿಂದ ಮನವಿ

Spread the loveನವದೆಹಲಿ: ಪಂಚರಾಜ್ಯಗಳ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತಿವೆ. ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ಮಾಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ