Breaking News

ದುಡಿಯುವ ಕಾರ್ಯಕರ್ತರ ಪಡೆ ರಚಿಸುವುದೇ ಕಾಂಗ್ರೆಸ್ ಪ್ರಚಾರ ಸಮಿತಿಯ ಉದ್ದೇಶ:ವಿನಯಕುಮಾರ ಸೊರಕೆ

Spread the love

ಚಿಕ್ಕೋಡಿ-“ಸೇನಾಧಿಪತಿಗಳನ್ನು ಹುಟ್ಟುಹಾಕುದಷ್ಟೇ ಅಲ್ಲ, ಸೈನಿಕರ ಅವಶ್ಯಕತೆಯೂ ಕಾಂಗ್ರೆಸ್ ಪಕ್ಷಕ್ಕಿದೆ. ಹೀಗಾಗಿ ಪದಾಧಿಕಾರಿಗಳ ನೇಮಕದೊಂದಿಗೆ ಪಕ್ಷಕ್ಕೆ ದುಡಿಯುವ ಕಾರ್ಯಕರ್ತರ ಪಡೆ ರಚಿಸುವುದೇ ಕಾಂಗ್ರೆಸ್ ಪ್ರಚಾರ ಸಮಿತಿಯ ಉದ್ದೇಶವಾಗಿದೆ” ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ, ಮಾಜಿ ಸಚಿವ ವಿನಯಕುಮಾರ ಸೊರಕೆ ಹೇಳಿದರು.
ಚಿಕ್ಕೋಡಿ ಪಟ್ಟಣದ ಲೋಕೋಪಯೋಗಿ ಸಭಾಭವನದಲ್ಲಿ ಆಯೋಜಿಸಿದ ಚಿಕ್ಕೋಡಿ ಜಿಲ್ಲಾ ಮಟ್ಟದ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ” ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಲು ಈಗಿನಿಂದಲೇ ಪಕ್ಷ ಮುಂದಡಿ ಇಟ್ಟಿದೆ. ಸಾಮಾಜಿಕ ಕಳಕಳಿ ಹೊಂದಿರುವ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳೇ ಚುನಾವಣೆ ಗೆಲ್ಲಲು ಆಧಾರವಾಗಿದೆ” ಎಂದರು.
ಪ್ರಚಾರ ಸಮಿತಿಯ ರಾಜ್ಯ ಉಪಾಧ್ಯಕ್ಷ ಮುನೀರ ಜನಸಾಲಿ ಮಾತನಾಡಿ, ” ರಾಜ್ಯ ಹಾಗೂ ರಾಷ್ಟ್ರ ಮಟ್ಟದ ನಾಯಕರನ್ನು ಹುಟ್ಟು ಹಾಕುವವರೇ ಬೂತ್ ಮಟ್ಟದ ಕಾರ್ಯಕರ್ತರು. ಹಾಗಾಗಿ ಬೂತ್ ಮಟ್ಟದ ಕಾರ್ಯಕರ್ತರ ಜವಾಬ್ದಾರಿಯು ಮಹತ್ತರವಾಗಿದೆ” ಎಂದರು ಹೇಳಿದರು.
ಸಭೆಯನ್ನು ಉದ್ದೇಶಿಸಿ ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಮುಂತಾದವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಸಭೆಯಲ್ಲಿ ಮುಖಂಡರಾದ ಮಲ್ಲಿಕಾರ್ಜುನ ರಾಶಿಂಗೆ, ಸಿದಿಕ್ ಅಂಕಲಗಿ, ಸಂತೋಷ ಮುಡಸಿ,
ನಿರ್ಮಲಾ ಪಾಟೀಲ, ರಮೇಶ ಪಾಟೀಲ, ಶರಣಪ್ಪ ಕೊಟಗಿ, ಪ್ರಭಾಕರ ಕೋರೆ, ಸಾಬೀರ ಜಮಾದಾರ, ಗುಲಾಬಹುಸೇನ್ ಬಾಗವಾನ, ರವಿ ಪಾಟೀಲ, ರಾಮಕೃಷ್ಣ ಪಾನಬುಡೆ, ಸತೀಶ ಕುಲಕರ್ಣಿ ಇತರರು ಇದ್ದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ