Breaking News

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the love

ಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ ಮಾಸ್ಕ್​ ಮ್ಯಾನ್ (Mask Man) (ಭೀಮ) ಯಾರು ಏನು ಎನ್ನುವುದೇ ಗೊತ್ತಿಲ್ಲ. ಫುಲ್ ದೇಹ ಕವರ್ ಮಾಡಿಕೊಂಡು ಮುಖಕ್ಕೆ ಮಾಸ್ಕ್​ ಹಾಕಿಕೊಂಡು ಕಾಣಿಸಿಕೊಂಡಿದ್ದಾನೆ.

ಹೀಗಾಗಿ ಮಾಸ್ಕ್​ ಮ್ಯಾನ್ ಯಾರು ಎನ್ನುವುದೇ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಆದ್ರೆ, ಇದೀಗ ಆ ಮಾಸ್ಕ್​ ಮ್ಯಾನ್ ಯಾರು ಏನು? ಎಲ್ಲಿಯವನು ಎನ್ನುವ ಒಂದೊಂದೇ ಅಂಶಗಳು ಆಚೆ ಬರುತ್ತಿವೆ. ನಿನ್ನೆ ಅಷ್ಟೇ ಮಾಸ್ಕ್​ ಮ್ಯಾನ್ ಸ್ನೇಹಿತ ರಾಜು ಎನ್ನುವಾತ ಕೆಲ ವಿಚಾರಗಳನ್ನು ಹಂಚಿಕೊಂಡಿದ್ದ.

ಇದರ ಬೆನ್ನಲ್ಲೇ ಇದೀಗ ಸ್ವತಃ ಅನಾಮಿಕನ ಆವ ಭಾವ , ಆತನ ದೇಹದ ಆಕಾರ ನೋಡಿ ಮಾಜಿ ಪತ್ನಿ ಪ್ರತ್ಯಕ್ಷಳಾಗಿದ್ದು, ಮಾಸ್ಕ್​ ಮ್ಯಾನ್​​ನ ಹಿನ್ನಲೆಯನ್ನು ಬಿಚ್ಚಿಟ್ಟಿದ್ದಾಳೆ.

ಮಂಡ್ಯದಲ್ಲಿ ಮಾತನಾಡಿರುವ ಅನಾಮಿಕನ ಮೊದಲ ಪತ್ನಿ,1999ರಲ್ಲಿ ಮದುವೆಯಾಗಿದ್ದು, 7 ವರ್ಷ ಸಂಸಾರ ಮಾಡಿದ್ದೆವು‌. ನಮಗೆ ಒಂದು ಹೆಣ್ಣು, ಒಂದು ಗಂಡು ಮಕ್ಕಳಿದ್ದಾರೆ. ಅವನ ಬಳಿ ಒಳ್ಳೆತನ ಇರಲಿಲ್ಲ. ಬರೀ ಸುಳ್ಳು ಹೇಳುತ್ತಿದ್ದ.ಮದುವೆ ಬಳಿಕ ಧರ್ಮಸ್ಥಳದ ನೇತ್ರಾವತಿಯಲ್ಲಿ 7 ವರ್ಷ ಇದ್ದೆವು. ಧರ್ಮಸ್ಥಳದಲ್ಲಿ ಕಸಗುಡಿಸುವುದು, ಬಾತ್‌ರೂಂ ತೊಳೆಯುವುದು ಮಾಡುತ್ತಿದ್ದರು. ಆದರೆ, ಈಗ ಆತ ನೂರಾರು ಶವ ಹೂತಿದ್ದೇನೆ ಎಂದು ಹೇಳುತ್ತಿರುವುದು ಸುಳ್ಳು. ದುಡ್ಡಿನ ಆಮಿಷಕ್ಕೆ ಹೀಗೆ ಮಾಡುತ್ತಿರುಬಹುದು ಎಂದು ಸ್ಫೋಟಕ ವಿಚಾರಗಳನ್ಜು ಬಿಚ್ಚಿಟ್ಟಿದ್ದಾಳೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ