Breaking News

ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಮೃತಪಟ್ಟ ಕುಟುಂಬಗಳಿಗೆ ₹5 ಲಕ್ಷ ಪರಿಹಾರ

Spread the love

ಬೆಂಗಳೂರು: ಮೈಕ್ರೋ ಫೈನಾನ್ಸಿಯರ್​ಗಳ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡ ಜನರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಪರಿಷತ್​ನಲ್ಲಿ ಘೋಷಿಸಿದ್ದಾರೆ.

ಸಾಲಬಾಧೆಗೆ ತತ್ತರಿಸಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅವರ ಕುಟುಂಬಕ್ಕೆ ನೀಡಲಾಗುವ ಪರಿಹಾರ ಮಾದರಿಯಲ್ಲೇ ಮೈಕ್ರೋ ಫೈನಾನ್ಸ್​ಗಳ ಹಾವಳಿಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಗಳ ಕುಟುಂಬಕ್ಕೂ 5 ಲಕ್ಷ ರೂ ನೀಡಲಾಗುವುದು. ಆತ್ಮಹತ್ಯೆ ಪ್ರಮಾಣವನ್ನು ಶೂನ್ಯಕ್ಕೆ ಇಳಿಸುವುದೇ ನಮ್ಮ ಉದ್ದೇಶ. ಈ ಬಗ್ಗೆ ಹಣಕಾಸು ಇಲಾಖೆ ಹಾಗೂ ಮುಖ್ಯ ಕಾರ್ಯದರ್ಶಿಯೊಂದಿಗೆ ಮಾತುಕತೆ ನಡೆಸಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಜೆಪಿ ಸದಸ್ಯ ಸಿ.ಎನ್.ಮಂಜೇಗೌಡ ಅವರ ಪ್ರಶ್ನೆಗೆ ಸಿಎಂ ಉತ್ತರಿಸಿದರು.

ರಾಜ್ಯದ ಗ್ರಾಮೀಣ ಭಾಗದಲ್ಲಿ ಜನರು ಮೈಕ್ರೋ ಫೈನಾನ್ಸಿಯರ್ ಕಿರುಕುಳಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಪರಿಶೀಲಿಸಿ 2024ರಲ್ಲಿ ಸುಗ್ರೀವಾಜ್ಞೆ ತಂದು ಕರ್ನಾಟಕ ಕಿರುಸಾಲ ಹಾಗೂ ಸಣ್ಣಸಾಲ ಕಾಯ್ದೆ ಜಾರಿ ಮಾಡಿದ ಬಳಿಕ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಕಾನೂನು ಜಾರಿಗೆ ಮುನ್ನ 2023ರಲ್ಲಿ 8 ಮಂದಿ 2024ರಲ್ಲಿ 6 ಮಂದಿ ಮೃತರಾಗಿದ್ದರು. 2025ರ ಫೆಬ್ರವರಿಗೂ ಮುನ್ನ 24 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಕಾಯ್ದೆ ಜಾರಿಯಾದ ಬಳಿಕ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಇಳಿಕೆಯಾಗಿದೆ ಎಂದು ಸಿಎಂ ತಿಳಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ